ಕಾಂಗ್ರೆಸ್ ಸೇರ್ಪಡೆ
ರಾಣಿಬೆನ್ನೂರು: ತಾಲೂಕಿನ ಮಣಕೂರು ಗ್ರಾಮದಲ್ಲಿ ಶುಕ್ರವಾರ ರಾತ್ರಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಣಕೂರು ಗ್ರಾಮದ ಕೆಜೆಪಿ ಹಾಗೂ ಬಿಜೆಪಿ ಕಾರ್ಯಕರ್ತರು ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತಗಳನ್ನು ಮೆಚ್ಚಿಕೊಂಡು ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆಂದು ತಾಲೂಕು ಯುವ ಕಾಂಗ್ರೆಸ್ ಮುಖಂಡ ಹಾಗೂ ತಾಪಂ ಮಾಜಿ ಅಧ್ಯಕ್ಷ ರವೀಂದ್ರಗೌಡ ಎಫ್. ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೈಗೆ ಶಿವನಗೌಡ್ರ ಆಯ್ಕೆ
ಹಿರೇಕೆರೂರು: ಹಿರೇಕೆರೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಡಿ.ಸಿ. ಪಾಟೀಲ ರಾಜಿನಾಮೆ ಸಲ್ಲಿಸಿದ್ದರಿಂದ ಚುನಾವಣಾ ಕಾರ್ಯಗಳ ಪ್ರಯುಕ್ತ ಅಡ್ಹಾಕ್ ಸಮಿತಿ ರಚಿಸಲಾಗಿದೆ. ಈ ಸಮಿತಿಗೆ ಜಿ. ಶಿವನಗೌಡ್ರ ಅವರನ್ನು ಬ್ಲಾಕ್ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಶಾಸಕ ಬಿ.ಸಿ. ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮ್ಮ ನಿಧನ
ಶಿಗ್ಗಾಂವಿ: ತಾಲೂಕಿನ ಗಂಜಿಗಟ್ಟಿ ಗ್ರಾಮದ ಶಿವಮ್ಮ ಚ. ಚಿನ್ನಪ್ಪನವರ (82) ಶುಕ್ರವಾರ ಮೃತರಾದರು. ಮೃತರರಿಗೆ ಓರ್ವ ಪುತ್ರ, ಇಬ್ಬರು ಪುತ್ರಿಯರು ಅಪಾರ ಬಂಧುಗಳಿದ್ದಾರೆ. ಸಚಿವ ಬಸವರಾಜ ಬೊಮ್ಮಾಯಿ, ಮಾಜಿ ಸಂಸದ ಮಂಜುನಾಥ ಕುನ್ನೂರ, ರಾಜು ಕರಿಗೌಡ್ರ ಸಂತಾಪ ಸೂಚಿಸಿದ್ದಾರೆ