ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಮತ ಚಲಾಯಿಸಿ, ಪ್ರಜಾಪ್ರಭುತ್ವ ಗಟ್ಟಿಗೊಳಿಸಿ

Lingaraj Badiger
Updated On : 16 Apr 2013, 12:10 pm

ಕನ್ನಡಪ್ರಭ ವಾರ್ತೆ, ಹಿರೇಕೆರೂರು, ಏ. 15
ಅಮೂಲ್ಯವಾದ ಮತವನ್ನು ಅರ್ಹ ಅಭ್ಯರ್ಥಿಗೆ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವುದು ಎಲ್ಲರ ಕರ್ತವ್ಯ ಎಂಬ ಜಾಗೃತಿ ಮೂಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಸಿ. ಆನಂದ ಹೇಳಿದರು.
ಪಟ್ಟಣದ ಗುರುಭವನದಲ್ಲಿ ತಾಲೂಕಿನ ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ ಹಮ್ಮಿಕೊಳ್ಳಲಾಗಿದ್ದ ಮತದಾರರ ಜಾಗೃತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಿಷ್ಠಗೊಳಿಸಲು ಚುನಾವಣೆಗಳಲ್ಲಿ ಮತ ಚಲಾವಣೆ ಮಾಡುವುದು ದೇಶದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು.
18 ವರ್ಷ ತುಂಬಿದ ಎಲ್ಲರೂ ಕಡ್ಡಾಯವಾಗಿ ಮತದಾರರ ಯಾದಿಯಲ್ಲಿ ಹೆಸರನ್ನು ಸೇರ್ಪಡೆ ಮಾಡಿಕೊಂಡು ಮತ ಚಲಾಯಿಸುವಂತೆ ಶಿಕ್ಷಕರು ತಿಳಿ ಹೇಳಬೇಕು ಎಂದರು.
ಮತದಾನ ಪ್ರತಿಯೊಬ್ಬರಿಗೂ ಸಂವಿಧಾನ ನೀಡಿರುವ ಹಕ್ಕು ಎಂಬುದನ್ನು ಮನವರಿಕೆ ಮಾಡಿಕೊಡಬೇಕು. ಮತದಾನ ಕಾರ್ಯಕ್ಕಾಗಿ ಅವಶ್ಯವಿರುವ ಶಾಲಾ ಕೊಠಡಿಗಳನ್ನು ಸುವ್ಯವಸ್ಥಿತವಾಗಿ ಇಡಬೇಕು.
ಚುನಾವಣೆಯ ಅಗತ್ಯ ಸಿಬ್ಬಂದಿ ವರ್ಗ ಕೇಂದ್ರ ಸ್ಥಾನದಲ್ಲಿದ್ದು, ಮತದಾನ ಜಾಗೃತಿ ಕಾರ್ಯಕ್ರಮದ ಯಶಸ್ಸಿಗೆ ಮುಂದಾಗಬೇಕು ಎಂದು ಮುಖ್ಯ ಶಿಕ್ಷಕರಿಗೆ ಸಲಹೆ ಮಾಡಿದರು.
ಕ್ಷೇತ್ರ ಸಮನ್ವಯಾಧಿಕಾರಿ ಎನ್. ಸುರೇಶಕುಮಾರ, ಅಕ್ಷರ ದಾಸೋಹ ಅಧಿಕಾರಿ ಟಿ.ಆರ್. ಮೂಡಿ, ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಆರ್. ಮಕಾಂದಾರ, ಯು.ಎಚ್. ಬಿದರಿ, ಬಿ.ಪಿ. ಬಿದರಿ, ಪಿ.ಬಿ. ನಿಂಗನಗೌಡ್ರ, ಎಂ.ಎಸ್. ದೀವಿಗಿಹಳ್ಳಿ, ಎಸ್.ಸಿ. ಹಾರ್ನಳ್ಳಿ, ಜಿ.ಬಿ. ಮರಿಗೌಡ್ರ, ಆರ್.ಕೆ. ಲಮಾಣಿ, ಎಂ.ಎಂ. ಮತ್ತೂರ ಹಾಜರಿದ್ದರು. ಸಿ.ಡಿ. ಕರಿಯಣ್ಣವರ ಸ್ವಾಗತಿಸಿದರು. ಆರ್.ಎಸ್. ಹಂಚಿನಮನಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement