ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಜೆಡಿಎಸ್‌ನಿಂದ ಪರಮೇಶ್ವರಪ್ಪ ಸ್ಪರ್ಧೆ

Lingaraj Badiger
Updated On : 17 Apr 2013, 1:00 am

ಕನ್ನಡಪ್ರಭ ವಾರ್ತೆ, ಹಾವೇರಿ, ಏ. 16
ಜಿಪಂ ಮಾಜಿ ಅಧ್ಯಕ್ಷ ಪರಮೇಶ್ವರಪ್ಪ ಮೆಗಳಮನಿ ಜೆಡಿಎಸ್ ಅಭ್ಯರ್ಥಿಯಾಗಿ ಹಾವೇರಿ ವಿಧಾನಸಭಾ ಕ್ಷೇತ್ರ ಸ್ಪರ್ಧಿಸಲಿದ್ದಾರೆ.
ಸೋಮವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಮೆಗಳಮನಿ, ತಾವು ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತರಾಗಿ ದುಡಿದರೂ ತಮಗೆ ಈ ಬಾರಿ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡದಿರುವುದರಿಂದ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದೇವೆ ಎಂದರು.
ಕ್ಷೇತ್ರದ ಮತದಾರರೊಂದಿಗೆ ತಾವು ಹೊಂದಿರುವ ಸಂಬಂಧ ಹಾಗೂ ತಾವು ಈವರೆಗೂ ಕೈಗೊಂಡಿರುವ ಜನಪರ ಕಾರ್ಯಕ್ರಮಗಳನ್ನು ಗಮನಿಸಿ ಪಕ್ಷದ ರಾಜ್ಯಾಧ್ಯಕ್ಷರು ಆಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ತಮಗೆ ಹಾವೇರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಸಮ್ಮತಿ ಸೂಚಿಸಿದ್ದಾರೆ ಎಂದೂ ಮೇಗಳಮನಿ ತಿಳಿಸಿದರು.
ಹಾವೇರಿ ಮತಕ್ಷೇತ್ರಕ್ಕೆ ಈಗಾಗಲೇ ಕೆಜೆಪಿಯಿಂದ ನೆಹರು ಓಲೇಕಾರ, ಕಾಂಗ್ರೆಸ್‌ನಿಂದ ರುದ್ರಪ್ಪ ಲಮಾಣಿ, ಬಿಜೆಪಿಯಿಂದ ಮಲ್ಲೇಶಪ್ಪ ಹರಿಜನ್ ಅವರುಗಳ ಹೆಸರು ಆಖೈರಗೊಂಡಿದೆ ಎಂಬುದನ್ನು ಇಲ್ಲಿ ಸ್ಮರಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement