ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಹಾವೇರಿ: 25, 26ರಂದು ಜಿಲ್ಲೆ ಇತಿಹಾಸ, ಪುರಾತತ್ವ ವಿಚಾರ ಸಂಕಿರಣ

Rashmi Kasaragodu
Updated On : 21 Apr 2013, 12:26 pm

ಹಾವೇರಿ: ಪ್ರಾಚ್ಯವಸ್ತು ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಮೈಸೂರು ಹಾಗೂ ಹಾವೇರಿ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯ ಆಶ್ರಯದಲ್ಲಿ ಹಾವೇರಿ ಜಿಲ್ಲೆಯ ಇತಿಹಾಸ ಮತ್ತು ಪುರಾತತ್ವ ಕುರಿತು ಏ. 25 ಹಾಗೂ 26ರಂದು ವಿಚಾರ ಸಂಕಿರಣ ನಗರದ ಶಿವಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಜರುಗಲಿದೆ.
ಏ. 25ರಂದು ಜರುಗುವ ಉದ್ಘಾಟನಾ ಕಾರ್ಯಕ್ರಮದ ಸಾನ್ನಿಧ್ಯವನ್ನು ಹುಕ್ಕೇರಿಮಠದ ಸದಾಶಿವ ಸ್ವಾಮಿಗಳು ವಹಿಸಲಿದ್ದಾರೆ. ಮೈಸೂರು ಪ್ರಾಚ್ಯವಸ್ತು ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಆಯುಕ್ತ ಪಿ.ಎಸ್. ವಸ್ತ್ರದ ಉದ್ಘಾಟನೆ ನೆರವೇರಿಸುವರು. ಮೈಸೂರಿನ ಖ್ಯಾತ ಇತಿಹಾಸಕಾರ ಡಾ೤ ಎಂ.ಎಸ್. ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸುವರು. ನಿವೃತ್ತ ಪ್ರಾಧ್ಯಾಪಕ ಡಾ೤ ಆರ್.ಎಂ. ಷಡಕ್ಷರಯ್ಯ ಹಾಗೂ ಶಿವಲಿಂಗೇಶ್ವರ ವಿದ್ಯಾಪೀಠದ ಕಾರ್ಯಾಧ್ಯಕ್ಷ ಪಿ.ಡಿ. ಶಿರೂರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ನಿವೃತ್ತ ಉಪನಿರ್ದೇಶಕಿ ಎಸ್.ಕೆ. ಪೋತ್ನೀಸ್ ಅವರು ಸಮ್ಮೇಳನಾಧ್ಯಕ್ಷರು ಎಂದು ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಪೀಠದ ಪ್ರಾಚಾರ್ಯರಾದ ಡಾ೤ ಸವಿತಾ ಹಿರೇಮಠ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement