ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ರು. 8 ಲಕ್ಷ ಮೌಲ್ಯದ ಸೀರೆ ವಶ

Rashmi Kasaragodu
Updated On : 23 Apr 2013, 10:44 am

ರಾಣಿಬೆನ್ನೂರು: ಮತದಾರರಿಗೆ ಹಂಚುವುದಕ್ಕಾಗಿ 51 ಬಂಡಲ್‌ಗಳಲ್ಲಿ ಸಂಗ್ರಹಿಸಿಡಲಾಗಿದ್ದ ರು. 8 ಲಕ್ಷ ಅಂದಾಜು ಮೌಲ್ಯದ 5865 ಸೀರೆಗಳನ್ನು ತಹಸೀಲ್ದಾರ್ ಹಾಗೂ ಚುನಾವಣಾಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ರಾಣಿಬೆನ್ನೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಬಿಬಿಎಂಪಿ ಮಾಜಿ ಉಪ ಮೇಯರ್ ಆರ್. ಶಂಕರ್ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನಗರದ ಹಲಗೇರಿ ರಸ್ತೆಯಲ್ಲಿರುವ ಮಹಾತ್ಮಾ ಗಾಂಧಿ ಕನ್ನಡ ಕಾನ್ವೆಂಟ್ ಖಾಸಗಿ ಶಾಲೆ ಪಕ್ಕದಲ್ಲಿರುವ ಗೋದಾಮಿನಲ್ಲಿ ರಾಣಿಬೆನ್ನೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಆರ್. ಶಂಕರ್ ಮತದಾರರಿಗೆ ಹಂಚುವುದಕ್ಕಾಗಿ ಸೀರೆಗಳನ್ನು ಅಕ್ರಮವಾಗಿ ಸಂಗ್ರಹಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ತಹಸೀಲ್ದಾರ್ ಎಚ್. ಶಿವಕುಮಾರ ಹಾಗೂ ತಾಲೂಕು ಚುನಾವಣಾಧಿಕಾರಿ ಬಸನಗೌಡ ಸಿಬ್ಬಂದಿ ಹಾಗೂ ಪೊಲೀಸರೊಂದಿಗೆ ದಾಳಿ ನಡೆಸಿ ಸೀರೆ ಹಾಗೂ ಆರ್. ಶಂಕರ್ ಭಾವಚಿತ್ರವಿರುವ 8 ಪ್ಯಾಕೆಟ್ ಶರ್ಟ್‌ಗಳನ್ನು ವಶಕ್ಕೆ ತೆಗೆದುಕೊಂಡಿದ್ದರೆ.  ಬಿಬಿಎಂಪಿ ಮಾಜಿ ಉಪ ಮೇಯರ್, ರಾಣಿಬೆನ್ನೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆರ್. ಶಂಕರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಹಸೀಲ್ದಾರ್ ಎಚ್. ಶಿವಕುಮಾರ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement