ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಖಾದ್ರಿಯವರಿಂದ ಅಭಿವೃದ್ಧಿ ಅಸಾಧ್ಯ

Lingaraj Badiger
Updated On : 26 Apr 2013, 11:01 am

ಕನ್ನಡಪ್ರಭ ವಾರ್ತೆ, ಶಿಗ್ಗಾಂವಿ, ಏ. 25
ತಾಲೂಕಿನ ಕಾಮನಹಳ್ಳಿ ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಡಲು ಸಾಧ್ಯವಾಗದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಅಜ್ಜಂಪೀರ ಖಾದ್ರಿ ಅವರಿಂದ ಇಡೀ ಕ್ಷೇತ್ರದ ಅಭಿವೃದ್ಧಿ ಕನಸಿನ ಮಾತಾಗಿದೆ ಎಂದು ಬಿಜೆಪಿ ಅಭ್ಯರ್ಥಿ, ಸಚಿವ ಬಸವರಾಜ ಬೊಮ್ಮಾಯಿ ಟೀಕಿಸಿದರು.
ಗುರುವಾರ ಕಾಮನಹಳ್ಳಿ ಗ್ರಾಮದಲ್ಲಿ ಮತ ಯಾಚಿಸಿದ ನಂತರ ಅವರು ಮಾತನಾಡಿದರು.
ಕಾಂಗ್ರೆಸ್‌ನಿಂದ ದಾರಿ ತಪ್ಪಿಸುವ ಕಾರ್ಯ
50 ವರ್ಷ ಅಧಿಕಾರದಲ್ಲಿದ್ದರೂ ಕಾಂಗ್ರೆಸ್‌ನಿಂದ ಅಭಿವೃದ್ಧಿಯಾಗಿಲ್ಲ. ತಾವು 5 ವರ್ಷದ ಅಧಿಕಾರವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿದ್ದೇನೆ ಇದನ್ನು ಸಹಿಸಲಾಗದ ಕಾಂಗ್ರೆಸ್ಸಿಗರು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆಂದು ಆರೋಪಿಸಿದ ಬೊಮ್ಮಾಯಿ, ಸರ್ಕಾರ ಅನುದಾನ ನೀಡಿದರೂ ಕ್ಷೇತ್ರ ಅಭಿವೃದ್ಧಿಪಡಿಸಬೇಕೆಂಬ ಕನಿಷ್ಠ ಪ್ರಜ್ಞೆ ಕಾಂಗ್ರೆಸ್ಸಿಗರಿಗೆ ಇರಲಿಲ್ಲ ಎಂದು ದೂರಿದರು.
ಅಭಿವೃದ್ಧಿ ಹಿಂದೆ ಮತದಾರರ ಶಕ್ತಿ
ಅಭಿವೃದ್ಧಿ ಕಾರ್ಯ ಗಮನಿಸುತ್ತಿರುವ ಮತದಾರ ಪ್ರಸಕ್ತ ಚುನಾವಣೆಯಲ್ಲಿ ತಾವು ಅಭೂತಪೂರ್ವ ಗೆಲವು ಸಾಧಿಸಬೇಕೆಂಬ ಉದ್ದೇಶ ಹೊಂದಿ ತಮ್ಮೊಂದಿಗೆ ಟೊಂಕಕಟ್ಟಿ ನಿಂತಿದ್ದಾರೆ. ತಮ್ಮ ಅಧಿಕಾರವಧಿಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ಹಿಂದೆ ಮತದಾರರ ಶಕ್ತಿ ಇದೆ ಎಂದು ಸ್ಮರಿಸಿದರು.
ನಿರುದ್ಯೋಗ ನಿವಾರಣೆಗೆ ಶ್ರಮ
ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕ್ಷೇತ್ರದಲ್ಲಿ 5 ಹೊಸ ಕೈಗಾರಿಕೆಗಳನ್ನು ತರಲಾಗುವುದೆಂದ ಅವರು, ಪ್ರಸಕ್ತ ಚುನಾವಣೆಯಲ್ಲಿ ತಮಗೆ ಮತ್ತೊಂದು ಬಾರಿಗೆ ಅವಕಾಶ ನೀಡುವ ಮೂಲಕ ಬೆಂಬಲಿಸುವಂತೆ ಕೋರಿದರು.
ಸನ್ಮಾನ
ಜನಸಾಮಾನ್ಯರ ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಯೋಜನೆಗಳ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದೆಂದು ಬೊಮ್ಮಾಯಿ ಭರವಸೆ ನೀಡಿದರು. ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಕಾರ್ಯಕರ್ತರನ್ನು ಬೊಮ್ಮಾಯಿ ಇದೇ ಸಂದರ್ಭದಲ್ಲಿ ಸನ್ಮಾನಿಸಿದರು. ಅಧ್ಯಕ್ಷ ದೇವಣ್ಣ ಚಾಕಲಬ್ಬಿ, ಜಿಪಂ ಸದಸ್ಯೆ ಸರೋಜವ್ವ ಆಡಿನ, ಅರ್ಜುನ ಹಂಚಿನಮನಿ, ಶಿವಾನಂದ ಮ್ಯಾಗೇರಿ ಮತ್ತಿತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement