ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಮತದಾನ ಜಾಗೃತಿ ಜಾಥಾ, ಮನೆ ಮನೆಗೆ ಭೇಟಿ

Lingaraj Badiger
Updated On : 26 Apr 2013, 11:03 am

ಹಾವೇರಿ: ಜನಸಾಮಾನ್ಯರಿಗೆ ಮತದಾನದ ಮಹತ್ವ ಕುರಿತು ಅರಿವು ಮೂಡಿಸಲು, ಮತದಾನಕ್ಕಾಗಿ ಜಾಥಾ ಹಾಗೂ ಮನೆ ಭೇಟಿ ಕಾರ್ಯಕ್ರಮಕ್ಕೆ ಗುರುವಾರ ಜಿಲ್ಲಾ ನಿರೂಪಣಾಧಿಕಾರಿ ವಿಜಯಕುಮಾರ ಕೆ.ಎಚ್. ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಲಿತಾ ಡಿ. ಎಚ್ ಚಾಲನೆ ನೀಡಿದರು.
ಮತದಾನ ಜಾಗೃತಿ ಜಾಥಾವನ್ನು ಜಿಲ್ಲಾ ಪಂಚಾಯಿತಿ, ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಆರಂಭಗೊಂಡ ಜಾಥಾ ನಗರದ ಜೆ.ಎಚ್. ಪಟೇಲ ವೃತ್ತದ ಮೂಲಕ ವಿದ್ಯಾನಗರಕ್ಕೆ ತೆರಳಿ, ವಿದ್ಯಾನಗರದಲ್ಲಿ ಮನೆ ಮನೆ ಭೇಟಿ ನೀಡಿ, ವಿಕಲಚೇತನರ ಮೂಲಕ ಮತದಾನದ ಕುರಿತು ಅರಿವು ಮೂಡಿಸಲಾಯಿತು.
18 ವರ್ಷ ತುಂಬಿದ ಎಲ್ಲ ವಯಸ್ಕರು ಸ್ವ-ಪ್ರೇರಿತರಾಗಿ ಮತ ಚಲಾಯಿಸುವಂತೆ ಹಾಗೂ ಬೇರೆಯವರಿಗೂ ಮತ ಚಲಾಯಿಸಲು ಅರಿವು ಮೂಡಿಸುವಂತೆ ತಿಳಿಸಲಾಯಿತು.
ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ, ಹಾವೇರಿ ಯೋಜನೆಯ ಮೇಲ್ವಿಚಾರಕಿಯರು ಮತ್ತು ಹಾವೇರಿ ವಲಯದ ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಇನ್ನಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement