ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಶಾಶ್ವತ ಕುಡಿಯುವ ನೀರಿಗಾಗಿ ಜೆಡಿಎಸ್ ಬೆಂಬಲಿಸಿ

Srinivasa Murthy VN
Updated On : 30 Apr 2013, 11:48 am

ಕನ್ನಡಪ್ರಭ ವಾರ್ತೆ, ರಾಣಿಬೆನ್ನೂರು, ಏ. 29
ತಾಲೂಕಿನ ಗಡಿ ಅಂಚಿನಲ್ಲಿ ಹರಿದಿರುವ ತುಂಗಭದ್ರಾ ನದಿಯಿಂದ ನಗರದ ದೊಡ್ಡ ಕೆರೆ ಸೇರಿದಂತೆ ತಾಲೂಕಿನ ಎಲ್ಲಾ ಕೆರೆಗಳಿಗೆ ನೀರು ನದಿಯಿಂದ ಪೈಪ್‌ಲೈನ್ ಮುಖಾಂತರ ನೀರು ತುಂಬಿಸುವುದರೊಂದಿಗೆ ರೈತರ ಪಂಪ್‌ಸೆಟ್‌ಗಳಿಗೆ ಹಾಗೂ ನಗರ ಮತ್ತು ಗ್ರಾಮಾಂತರ ಪ್ರದೇಶದ ಜನತೆ ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯಗೆ ಶಾಶ್ವತ ಪರಿಹಾರಕ್ಕಾಗಿ ಜನತೆ ಜೆಡಿಎಸ್ ಪಕ್ಷಕ್ಕೆ ಮತ ನೀಡಲು ಮುಂದಾಗಿದ್ದಾರೆಂದು ಅಭ್ಯರ್ಥಿ ಮಂಜುನಾಥ ಗೌಡಶಿವಣ್ಣನವರ ಹೇಳಿದರು.
ನಗರದ ವಿವಿಧ ಓಣಿಗಳಲ್ಲಿ ಪಾಯಾತ್ರೆಯ ಮೂಲಕ ಮತಯಾಚಿಸಿದ ನಂತರ ಮಾತನಾಡಿ, ಕುಮಾರಸ್ವಾಮಿಯವರು 20 ತಿಂಗಳು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ರಾಜ್ಯದ ಅಭಿವೃದ್ಧಿಗಾಗಿ ಮಾಡಿರುವ ಮಹತ್ವದ ಕಾರ್ಯಗಳೆ ನನ್ನ ಗೆಲವಿಗೆ ಶ್ರೀರಕ್ಷೆಯಾಗಿವೆ ಎಂದು ಮಂಜುನಾಥ ಗೌಡಶಿವಣ್ಣನವರ ಹೇಳಿದರು.
ಪಾದಯಾತ್ರೆ ಮೂಲಕ ಮತ ಯಾಚಿಸುವ ಸಮಯದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಸಿ.ಸಿ. ಸಣ್ಣಗೌಡ್ರ, ಸೋಮನಗೌಡ ಗೌಡಶಿವಣ್ಣನವರ, ಅಶೋಕ ಗಂಗನಗೌಡ್ರ, ಫಕ್ಕಿರಪ್ಪ ಹೋನ್ನಾಳಿ, ಅಶೋಕ ಅರಕೇರಿ,ಪರಮೇಶಪ್ಪ ಗೂಳಣ್ಣನವರ, ಬಿ.ಸಿ. ಗೌಡಶಿವಣ್ಣನವರ, ಮಳ್ಳಪ್ಪ ಮೇಲ್ಮಾಳಗಿ ಸೇರಿದಂತೆ ಅನೇಕರು ಉಪಸ್ದಿತರಿದ್ದರು.

ಪ್ರಾದೇಶಿಕ ಪಕ್ಷ ಬೆಂಬಲಿಸಿ: ಚಂಪಾ
ಬ್ಯಾಡಗಿ:
ಕಾಂಗ್ರೆಸ್‌ನ ಹೈಕಮಾಂಡ್ ಹಾಗೂ ಬಿಜೆಪಿಯ ಗರ್ಭಗುಡಿ ಸಂಸ್ಕೃತಿಗೆ ತಿಲಾಂಜಲಿ ಹೇಳುವ ಮೂಲಕ ತಮಿಳುನಾಡು ಮಾದರಿ ಪ್ರಾದೇಶಿಕ ಪಕ್ಷವೊಂದನ್ನು ರಾಜ್ಯದಲ್ಲಿ ಬೆಂಬಲಿಸುವಂತೆ ಹಿರಿಯ ಸಾಹಿತಿ ಹಾಗೂ ಕೆಜೆಪಿ ಮುಖಂಡ ಚಂದ್ರಶೇಖರ ಪಾಟೀಲ (ಚಂಪಾ) ಕರೆ ನೀಡಿದರು.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ ಎಪಿಎಂಸಿ ಯಾರ್ಡಿನಲ್ಲಿರುವ ಕೆಜೆಪಿ ಕಾರ್ಯಾಲಯದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.
ಕೋಮುವಾದಿ ಬಿಜೆಪಿಯಲ್ಲಿ ಕ್ರೈಸ್ತರಿಗೆ, ದಲಿತರಿಗೆ ಹಾಗೂ ಅಲ್ಪಸಂಖ್ಯಾತರಿಗೆ ಅವಕಾಶವಿಲ್ಲ. ಕಾಂಗ್ರೆಸ್‌ನ ಹೈಕಮಾಂಡ್ ಸಂಸ್ಕೃತಿಯಿಂದ ಪ್ರಭಾವವಿರುವ ವ್ಯಕ್ತಿಗಳು ಹಣ ಮಾಡುವ ದಂಧೆಯನ್ನಾಗಿ ಮಾಡಿಕೊಂಡಿದ್ದಾರೆ. ಹೀಗಾಗಿ ರಾಜ್ಯದ ಅಭಿವೃದ್ಧಿ ಹಿನ್ನೆಲೆಯಲ್ಲಿ ಗಟ್ಟಿತನವುಳ್ಳ ಜಾತ್ಯತೀತ ನಿಲುವಿನ ಪ್ರಾದೇಶಿಕ ಪಕ್ಷ ರಾಜ್ಯಕ್ಕೆ ಅನಿವಾರ್ಯವಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಪರ್ಯಾಯ ಶಕ್ತಿಯಾಗಿ ಹೊರ ಹೊಮ್ಮಲಿದೆ ಎಂದರು.
ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೊದಲ ಮುಖ್ಯಮಂತ್ರಿ ಬಿಎಸ್‌ವೈ ಬೆನ್ನ ಹಿಂದೆ ಇಡೀ ರೈತ ಸಮುದಾಯವಿದೆ. ಹೀಗಾಗಿ ರಾಜ್ಯದ 3 ಕ್ಷೇತ್ರಗಳಲ್ಲಿ ರೈತ ಸಂಘದ ಅಭ್ಯರ್ಥಿಗಳನ್ನು ಕೆಜೆಪಿ ಬೆಂಬಲಿಸುವ ಮೂಲಕ ವಿಧಾನಸಭೆ ಪ್ರವೇಶಕ್ಕೆ ಅನುಕೂಲ ಕಲ್ಪಿಸಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement