ನಾಳೆ ಮ್ಯಾರಥಾನ್
ಹಾವೇರಿ: ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಮೇ 2ರಂದು ಬೆಳಗ್ಗೆ 8 ಗಂಟೆಗೆ ಹುಕ್ಕೇರಿ ಮಠದಿಂದ ಮತದಾರರ ಜಾಗೃತಿಗಾಗಿ ಮ್ಯಾರಥಾನ್ ಓಟ ಏರ್ಪಡಿಸಿದೆ.
ಇಂದು ಕವಿಗೋಷ್ಠಿ
ಹಾವೇರಿ: ಮತದಾರರ ಜಾಗೃತಿಗಾಗಿ ಚುನಾವಣಾ ಆಯೋಗದ ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತು ಭಾಗವಹಿಸುವಿಕೆ ಕಾರ್ಯಕ್ರಮದ (ಸ್ವೀಪ್) ಜಿಲ್ಲಾ ಸಮಿತಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಮೇ 1ರಂದು ಬೆಳಗ್ಗೆ 11 ಗಂಟೆಗೆ ಹಾವೇರಿ ತಾಲೂಕು ಪಂಚಾಯತ್ ಸಭಾಭವನದಲ್ಲಿ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ವಿವಿಧ ಭಾಗಗಳಿಂದ ಆಹ್ವಾನಿತ 15 ಕವಿಗಳು ಈ ಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.