ಅಪೌಷ್ಟಿಕತೆ ನಿವಾರಿಸುವ ಕ್ಷೀರಭಾಗ್ಯ
ಕನ್ನಡಪ್ರಭ ವಾರ್ತೆ, ರಾಣಿಬೆನ್ನೂರು, ಆ. 6
ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಮಕ್ಕಳಲ್ಲಿ ಕಂಡುಬಂದಿರುವ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ವೃದ್ಧಿಸುವುದಕ್ಕಾಗಿ ಸರ್ಕಾರ ಕ್ಷೀರಭಾಗ್ಯ ಯೋಜನೆ ಜಾರಿಗೆ ತಂದಿದ್ದು, ಪಾಲಕರು ತಮ್ಮ ಮಕ್ಕಳನ್ನು ತಪ್ಪದೆ ಶಾಲೆಗೆ ಕಳುಹಿಸಲು ಮುಂದಾಗಬೇಕೆಂದು ಸಿದ್ದಾಪುರ ಲಂಬಾಣಿ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಬಸವರಾಜ ಬಿದರಿ ತಿಳಿಸಿದರು.
ಕ್ಷೀರಭಾಗ್ಯ ಯೋಜನೆಯಲ್ಲಿ ಶಾಲೆಯ ಹಾಗೂ ಅಂಗನವಾಡಿಯ ಮಕ್ಕಳಿಗೆ ಹಾಲು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಹ ಶಿಕ್ಷಕ ಎನ್.ಜೆ. ಶಿರಗೇರಿ ಉಪನ್ಯಾಸ ನೀಡಿದರು. ಶಿಕ್ಷಕಿಯರಾದ ಎ.ಎಲ್. ರಾಠೋಡ, ಜಿ.ಎಫ್. ಮಣ್ಣೂರು ಪ್ರಾಸ್ತಾವಿಕ ಮಾತನಾಡಿದರು. ಗ್ರಾಮದ ಮುಖಂಡರು, ಪಾಲಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಅಡುಗೆ ಸಿಬ್ಬಂದಿ ಇದ್ದರು.