ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಬಿಎಸ್‌ವೈ ಶೀಘ್ರ ಬಿಜೆಪಿಗೆ: ಬೊಮ್ಮಾಯಿ

Lingaraj Badiger
Updated On : 13 Aug 2013, 10:51 am

ಹಾವೇರಿ: ಕೆಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಬಿಎಸ್‌ವೈ ಅವರನ್ನು ಗೌರವಾನ್ವಿತ ಹುದ್ದೆಯೊಂದಿಗೆ ಬಿಜೆಪಿಗೆ ಸೇರಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ರಾಷ್ಟ್ರ ಮಟ್ಟದ ನಾಯಕರು ಚರ್ಚೆ ನಡೆಸಿದ್ದು, ಶೀಘ್ರ ನಿರ್ಣಯ ಪ್ರಕಟಿಸಲಿದ್ದಾರೆಂದು ಮಾಜಿ ಸಚಿವ ಬೊಮ್ಮಾಯಿ ಹೇಳಿದರು.
ಕೆಜೆಪಿ ಹಾವೇರಿ ಜಿಲ್ಲಾ ಘಟಕ ಸೋಮವಾರ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ತಮ್ಮನ್ನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು.
ಪರಿಷತ್ ಚುನಾವಣೆಯ ಈ ಸಂದರ್ಭದಲ್ಲಿ ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಕೆಜೆಪಿ ಬೆಂಬಲ ಸೂಚಿಸಿದೆ. ಇದೇ ಮಾದರಿಯಲ್ಲಿ ಅವಿಭಜಿತ ಧಾರವಾಡ ಜಿಲ್ಲೆಯಿಂದ ನಡೆಯುತ್ತಿರುವ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಬೆಂಬಲ ಸಿಗಲಿದೆ ಎಂಬ ವಿಶ್ವಾಸ ತಮಗಿದೆ ಎಂದರು.
ವಿಧಾನ ಪರಿಷತ್‌ಗೆ ನಡೆಯುತ್ತಿರುವ ಈ ಚುನಾವಣೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ರಾಜಕಾರಣದಲ್ಲಿ ಮುನ್ನ್ನುಡಿಯಾಗಲಿದೆ ಎಂದು ಅಭಿಪ್ರಾಯಪಟ್ಟ ಬೊಮ್ಮಾಯಿ, ಅವಿಭಜಿತ ಧಾರವಾಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಪರಿಷತ್‌ಗೆ ನಡೆಯುತ್ತಿರುವ ಈ ಚುನಾವಣೆಯನ್ನು ಬಿಜೆಪಿ ಹಾಗೂ ಕೆಜೆಪಿ ಜಂಟಿಯಾಗಿ ಎದುರಿಸಲಿವೆ ಎಂದರು.
ರಾಜ್ಯ ರಾಜಕಾರಣದಲ್ಲಿ ಧ್ರುವೀಕರಣ ನಡೆದಿದ್ದು, ಬಿಜೆಪಿ ಹಾಗೂ ಕೆಜೆಪಿ ಒಂದಾಗಬೇಕೆಂಬುದು ಕಾರ್ಯಕರ್ತರ ಇಚ್ಛೆ. ಈ ಬಗ್ಗೆ ಬಿಎಸ್‌ವೈ ಅವರೊಂದಿಗೆ ಬಿಜೆಪಿಯ ರಾಷ್ಟ್ರ ಮಟ್ಟದ ನಾಯಕರು ಚರ್ಚಿಸುತ್ತಿದ್ದು, ಅಂತಿಮ ನಿರ್ಣಯ ಕೈಗೊಳ್ಳಲಿದ್ದಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement