ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಸವಾಲು ಮೆಟ್ಟಿನಿಂತರೆ ಸಮೃದ್ಧಿ: ಹೊನ್ನಳ್ಳಿ

Lingaraj Badiger
Updated On : 16 Aug 2013, 11:47 am

ಹಾನಗಲ್ಲ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವ ಭಾರತ ಸವಾಲುಗಳನ್ನು ಮೆಟ್ಟಿನಿಂತು ಸಮೃದ್ಧ ರಾಷ್ಟ್ರವಾಗಿ ರೂಪುಗೊಳ್ಳಬೇಕು. ಮಕ್ಕಳನ್ನು ರಾಷ್ಟ್ರ ನಿರ್ಮಾಣಕ್ಕೆ ಅಣಿಗೊಳಿಸಬೇಕಿದೆ ಎಂದು ತಹಸೀಲ್ದಾರ್ ಡಾ೤ ನಾಗೇಂದ್ರ ಹೊನ್ನಳ್ಳಿ ಹೇಳಿದರು.
ಇಲ್ಲಿನ ತಾಲೂಕು ಕ್ರೀಡಾಂಗಣದಲ್ಲಿ 67ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿದ ಅವರು, ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದಕ್ಕೆ ಆದ್ಯತೆ ನೀಡಬೇಕಿದೆ. ಸಂವಿಧಾನದಲ್ಲಿ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡಲಾಗಿದೆ. ಕೋಮು ಸೌಹಾರ್ದ ಮೂಡಿಸಿ, ಶಾಂತಿ-ಸುವ್ಯವಸ್ಥೆಯ ಮೂಲಕ ದೇಶದ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದರು.
ತಾಪಂ ಅಧ್ಯಕ್ಷ ಮಲ್ಲನಗೌಡ್ರು ವೀರನಗೌಡ್ರು, ಪುರಸಭೆ ಮಾಜಿ ಅಧ್ಯಕ್ಷರಾದ ಕಲ್ಯಾಣಕುಮಾರ ಶೆಟ್ಟರ, ಹಸೀನಾಬಿ ನಾಯಕನವರ, ಸದಸ್ಯರಾದ ಎಂ.ಎಂ. ಸರ್ವಿಕೇರಿ, ಪಾಷಾಸಾಬ ಕೇಣಿ, ಲೀಲಾವತಿ ತಳವಾರ, ಸಂತೋಷ ಸುಣಗಾರ, ಶಕೀಲ ಬಾಳೂರ, ಅಶೋಕ ಆರೆಗೊಪ್ಪ, ರವಿರಾಜ ಕಲಾಲ, ಯಲ್ಲವ್ವ ಕಂಚಿಗೊಲ್ಲರ ಮತ್ತು ದಾನಪ್ಪ ಗಂಟೇರ, ತಾಪಂ ಇಓ ಮನೋಜಕುಮಾರ ಗಡಬಳ್ಳಿ, ಲೋಕೋಪಯೋಗಿ ಇಲಾಖೆ ಅಭಿಯಂತ ಬಿ.ವೈ. ಬಂಡಿವಡ್ಡರ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ನಾಗಾರ್ಜುನ ಗೌಡ, ಪುರಸಭೆ ಮುಖ್ಯಾಧಿಕಾರಿ ಎಂ.ಎಸ್. ಸೋಮಶೇಖರ, ಸಹಾಯಕ ಕೃಷಿ ನಿರ್ದೇಶಕ ಜಿ.ಎನ್. ಅಮೃತೇಶ್ವರ, ಜಿಪಂ ಅಭಿಯಂತ ಕೆ.ಆರ್. ಮಠದ, ಡಾ೤ ಚಂದ್ರಪ್ಪ ನರಸಗೊಂಡರ, ಎಸ್.ಎಫ್. ಕೆಂಗಮ್ಮನವರ ಉಪಸ್ಥಿತರಿದ್ದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ಬೀನಾ ಕುರುಡೇಕರ ಅವರಿಗೆ ರು. 2 ಸಾವಿರ ನಗದು ಪುರಸ್ಕಾರ ನೀಡಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ.ಸಾಲಿಮಠ ಸ್ವಾಗತಿಸಿದರು. ಶಿಕ್ಷಕ ನಿರಂಜನ ಗುಡಿ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement