ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಬಿಜೆಪಿಗೆ ಪಕ್ಷೇತರ ಅಭ್ಯರ್ಥಿ ಬಸವರಾಜ ಹಾದಿ ಬೆಂಬಲ

Lingaraj Badiger
Updated On : 19 Aug 2013, 11:45 am

ಹಾವೇರಿ: ಧಾರವಾಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನ ಪರಿಷತ್‌ಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಸವರಾಜ ಹಾದಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ಸೂಚಿಸಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಹಾವೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸೋಮಣ್ಣ ಬೇವಿನಮರದ ಅವರ ಸಮ್ಮುಖದಲ್ಲಿ ಬಿಜೆಪಿ ಅಭ್ಯರ್ಥಿ ಪ್ರದೀಪ ಶೆಟ್ಟರ್‌ಗೆ ತಮ್ಮ ಬೆಂಬಲ ಸೂಚಿಸಿದರಲ್ಲದೇ ಈ ವಿಷಯವನ್ನು ಮಾಧ್ಯಮದವರ ಎದುರು ಬಹಿರಂಗ ಪಡಿಸಿದರು. ನಂತರ ಪತ್ರಕರ್ತರೊಂದಿಗೆ ಬಸವರಾಜ ಹಾದಿ ಮಾತನಾಡಿ, ವಿಧಾನ ಪರಿಷತ್ ಚುನಾವಣೆಯಲ್ಲಿ ತಾವು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ತಮಗೆ ಜೆಡಿಎಸ್ ಪಕ್ಷವೂ ಬೆಂಬಲ ಸೂಚಿಸಿತ್ತು. ಇದೀಗ ಬಿಜೆಪಿಗೆ ಬೆಂಬಲಿಸುತ್ತಿರುವುದಾಗಿ ತಿಳಿಸಿದರಲ್ಲದೇ, ತಾವು ಬಿಜೆಪಿಗೆ ಬೆಂಬಲಿಸುವುದಕ್ಕೆ ಜೆಡಿಎಸ್ ಕೂಡಾ ಸಮ್ಮತಿ ಸೂಚಿಸಿದೆ. ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ಎಸ್. ಮಾಳಗಿ ಬಿಜೆಪಿಗೆ ಬೆಂಬಲಿಸುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾವು ಬಿಜೆಪಿಗೆ ಬೆಂಬಲಿಸುತ್ತಿರುವೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement