ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ
ಹಾವೇರಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಆಧುನೀಕರಣ ತಾಂತ್ರಿಕ ತರಬೇತಿ ಯೋಜನೆ, ಹಾವೇರಿ ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಧಾರವಾಡ ಸಿಡಾಕ್ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಆರು ವಾರಗಳ ಮೋಟಾರ್ ವೈಂಡಿಂಗ್ ಹಾಗೂ ಪಂಪ್‌ಸೆಟ್ ರಿಪೇರಿ ಕುರಿತ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕನಿಷ್ಠ 10ನೇ ತರಗತಿ ಉತ್ತೀರ್ಣರಾದ ಜಿಲ್ಲೆಯ ಆಸಕ್ತ ವಿದ್ಯಾವಂತ ನಿರುದ್ಯೋಗಿಗಳು ಒಂದು ಬಿಳಿ ಹಾಳೆಯಲ್ಲಿ ಬರೆದ ಅರ್ಜಿಯನ್ನು ಆಗಸ್ಟ್ 31ರೊಳಗಾಗಿ ಜಿಲ್ಲಾ ಉಪನಿರ್ದೇಶಕರು, ಸಿಡಾಕ್ ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಆಡಳಿತ ಭವನ, ಕೊಠಡಿ ಸಂಖ್ಯೆ- 24, ಬಿ ಬ್ಲಾಕ್, ದೇವಗಿರಿ - ಹಾವೇರಿ ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಿ.ಎಚ್. ಅಂಗಡಿ ಉಪ ನಿರ್ದೇಶಕರು (ಸಿಡಾಕ್) ಮೊ. 9880347072 ಅವರನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಕೈಗಾರಿಕಾ ಜಂಟಿನಿರ್ದೇಶಕ ವೀರಣ್ಣ ಎಚ್.ಎಸ್. ಅವರು ತಿಳಿಸಿದ್ದಾರೆ.
ಕೆಳದಿ ಚನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಹಾವೇರಿ: ಇನ್ನೊಬ್ಬರ ಪ್ರಾಣ ರಕ್ಷಣೆಗಾಗಿ ಧೈರ್ಯ ಶೌರ್ಯಗಳನ್ನು ಪ್ರದರ್ಶಿಸಿದ ಮಕ್ಕಳ ಪ್ರತಿಭೆಯನ್ನು ಗುರುತಿಸಲು ಬಾಲಕರಿಗಾಗಿ ಹೊಯ್ಸಳ ಹಾಗೂ ಬಾಲಕಿಯರಿಗಾಗಿ ಕೆಳದಿ ಚನ್ನಮ್ಮ ಪ್ರಶಸ್ತಿ ನೀಡಲು ಸೆಪ್ಟೆಂಬರ್ 2ರೊಳಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಚನ್ನಮ್ಮ ಹೊಳಿಹೊಸೂರ ಅವರು ತಿಳಿಸಿದ್ದಾರೆ. ಬಾಲಕ-ಬಾಲಕಿ ಅಸಾಧಾರಣ ಧೈರ್ಯ ಶೌರ್ಯವನ್ನು ಸಾಧಿಸಿರಬೇಕು ಹಾಗೂ ಈ ಸಾಧನೆ ಜಿಲ್ಲಾ ಮಟ್ಟದಲ್ಲಿ ಗುರುತಿಸಲ್ಪಟ್ಟಿರಬೇಕು. ಈ ಬಗ್ಗೆ ದಿನಪತ್ರಿಕೆಗಳಲ್ಲಿ ಪ್ರಕಟಣೆಗೊಂಡಿರಬೇಕು. ಗ್ರಾ.ಪಂ., ತಾ.ಪಂ., ಶಾಲಾ ಶಿಕ್ಷಕರು ಇಂತಹ ಸಾಧನೆಯನ್ನು ಗುರುತಿಸಿ ಜಿಲ್ಲಾ ಅರ್ಜಿಯೊಂದಿಗೆ ಮಗುವಿನ ಭಾವಚಿತ್ರ, ಶೌರ್ಯಸಾಧನೆ ತೋರಿದ ಬಗ್ಗೆ ಆರಕ್ಷಕ ಇಲಾಖೆಯ ಪ್ರಾಥಮಿಕ ತನಿಖಾ ವರದಿ, ಜನ್ಮ ದಿನಾಂಕ ಪ್ರಮಾಣಪತ್ರ ಹಾಗೂ ಧೈರ್ಯ, ಶೌರ್ಯ ತೋರಿದ ಬಗ್ಗೆ ಪತ್ರಿಕಾ ಪ್ರಕಟಣೆಗಳನ್ನು ಲಗತ್ತಿಸಿ ನಿಗದಿತ ದಿನಾಂಕದೊಳಗೆ, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆಡಳಿತ ಭವನ, 3ನೇ ಮಹಡಿ, ಎ-ಬ್ಲಾಕ್, ಹಾವೇರಿ ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ-08375-249002ನ್ನು ಸಂಪರ್ಕಿಸಬಹುದೆಂದು ತಿಳಿಸಿದ್ದಾರೆ.
ರೈತರಿಗೆ ಸೂಚನೆ
ಹಾವೇರಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ನೆರವಿನಲ್ಲಿ ಸೂಕ್ಷ್ಮ ನೀರಾವರಿ ಯೋಜನೆಯನ್ನು ತೋಟಗಾರಿಕೆ ಇಲಾಖೆಯು ಅನುಷ್ಠಾನಗೊಳಿಸುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಪದ್ಧತಿಯನ್ನು ಇಲಾಖೆಯಿಂದ ಅನುಮೋದಿತ ಕಂಪನಿ- ಡೀಲರ್‌ಗಳಿಂದ ಅಳವಡಿಸಿಕೊಂಡ ರೈತರಿಗೆ ಸರ್ಕಾರದ ಆದೇಶದಂತೆ ಪರಿಶಿಷ್ಟ ಜಾತಿ, ಪಂಗಡದವರಿಗೆ ಶೇ. 90, ಇತರೆ ವರ್ಗದ ರೈತರಿಗೆ ಶೇ.75 ಸಹಾಯಧನ ನೀಡಲಾಗುವುದು ಎಂದು ತೋಟಗಾರಿಕಾ ಉಪನಿರ್ದೇಶಕರು ತಿಳಿಸಿದ್ದಾರೆ. ಮಾಹಿತಿಗೆ ಸಂಬಂಧಿಸಿದ ತಾಲೂಕಿನ ತೋಟಗಾರಿಕೆ, ರೈತ ಸಂಪರ್ಕ ಕೇಂದ್ರ ಸಂಪರ್ಕಿಸಲು ತಿಳಿಸಿದ್ದಾರೆ.