ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ನಾಳೆ ನವಸಾಕ್ಷರ ಮೌಲ್ಯಮಾಪನ

Lingaraj Badiger
Updated On : 24 Aug 2013, 12:11 pm

ಹಾವೇರಿ: ಸಾಕ್ಷರ ಭಾರತ್‌ನಡಿ ನಿರ್ದಿಷ್ಟ ಕಲಿಕೆಮುಗಿಸಿದ ನವಸಾಕ್ಷರರಿಗೆ ಪ್ರತಿ ವರ್ಷ ಮಾರ್ಚ್, ಆಗಸ್ಟ್ ತಿಂಗಳಲ್ಲಿ ಮೌಲ್ಯಮಾಪನ ನಡೆಸಿ ಸರ್ಟಿಫಿಕೇಟ್ ನೀಡಲಾಗುವುದು. ರಾಷ್ಟ್ರೀಯ ಸಾಕ್ಷರತಾ ಮಿಷನ್, ರಾಷ್ಟ್ರೀಯ ಮುಕ್ತ ಶಾಲಾ ಸಂಸ್ಥೆ (ಎನ್‌ಐಓಎಸ್) ನವದೆಹಲಿ ಜಂಟಿಯಾಗಿ ನಡೆಸುವ ಈ ಮೌಲ್ಯಮಾಪನ ಆ. 25ರಂದು ದೇಶದ 19 ರಾಜ್ಯಗಳಲ್ಲಿ ಜರುಗಲಿದೆ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಡಾ. ಐ.ಎ. ಲೋಕಾಪುರ ತಿಳಿಸಿದ್ದಾರೆ. ಹಾವೇರಿ ಜಿಲ್ಲೆ 208 ಗ್ರಾಪಂನ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಜರುಗಲಿದ್ದು, ಜಿಲ್ಲೆಯಲ್ಲಿ 7000 ಜನ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಅಧೀಕ್ಷಕರಾಗಿ, ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕರು, ವೀಕ್ಷಕರಾಗಿ ಸಹಶಿಕ್ಷಕರು, ಮೇಲ್ವಿಚಾರಕರಾಗಿ ಪ್ರೇರಕರು ಕಾರ್ಯನಿರ್ವಹಿಸುವರು. ಪರೀಕ್ಷಾರ್ಥಿಗಳಿಗೆ ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಲಾಗುತ್ತಿದ್ದು, ನವಸಾಕ್ಷರರು ಆಯಾ ಗಾಪಂನ ಪ್ರೇರಕರು, ಸ್ವಯಂ ಸೇವಕರನ್ನು ಸಂಪರ್ಕಿಸಲು ತಿಳಿಸಿದೆ. ಈ ಪರೀಕ್ಷೆಉಸ್ತುವಾರಿಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆಯಾ ತಾಲೂಕು ಮಟ್ಟದ ನೋಡಲ್ ಅಧಿಕಾರಿಗಳಾಗಿ, ಗ್ರಾಪಂ ಅಭಿವೃದ್ಧಿ ಯೋಜನಾಧಿಕಾರಿಗಳು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೋಡಲ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ಎನ್.ಐ.ಓ.ಎಸ್. ಪರೀಕ್ಷಾ ಕೇಂದ್ರದ ಪ್ರಾದೇಶಿಕ ನಿರ್ದೇಶಕರು ಹಾಗೂ ಬೆಂಗಳೂರು ಲೋಕ ಶಿಕ್ಷಣ ನಿರ್ದೇಶನಾಲಯದ ಅಧಿಕಾರಿಗಳು, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಂಯೋಜಕರು ಪರಿವೀಕ್ಷಣೆ ನಡೆಸಲಿದ್ದಾರೆ. ಪರೀಕ್ಷೆಗೆ ಬೇಕಾದ ಸಿದ್ಧತೆಗಳನ್ನು ಎಲ್ಲ ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಲೋಕ ಶಿಕ್ಷಣ ಸಮಿತಿಗಳು ಮಾಡಿಕೊಂಡು ಯಾವುದೇ ಲೋಪದೋಷವಿಲ್ಲದಂತೆ ಪರೀಕ್ಷೆ ಯಶಸ್ವಿಗೊಳಿಸಲು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಡಾ. ಐ.ಎ. ಲೋಕಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement