ಸದೃಢ ರಾಷ್ಟ್ರ ನಿರ್ಮಾಣಕ್ಕೆ ಶ್ರಮಿಸಿ: ವಿಜಯ ಸವಣೂರು
ಬ್ಯಾಡಗಿ: ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಕೈಜೋಡಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳಿಸುವಂತೆ ಗ್ರಾಪಂ ಉಪಾಧ್ಯಕ್ಷ ವಿಜಯ ಸವಣೂರ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಮೋಟೆಬೆನ್ನೂರಿನ ಮಹದೇವ ಮೈಲಾರ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಉದ್ಘಾಟಿಸಿ ಅವರು ಮಾತನಾಡಿದರು. ಭಾರತ ವಿಶ್ವದಲ್ಲೇ ದೊಡ್ಡದಾದ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ರಾಷ್ಟ್ರವಾಗಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರ ಕಟ್ಟುವ ಕೆಲಸ ವಿದ್ಯಾರ್ಥಿಗಳಿಂದ ಆಗಬೇಕಾಗಿದ್ದು, ಅಲ್ಲಿನ ಅನುಭವಗಳು ಹಾಗೂ ಕಾರ್ಯವೈಖರಿ ಪರಿಕಲ್ಪನೆಗಳು ಇಂದಿನ ವಿದ್ಯಾರ್ಥಿಗಳಿಗೆ ಅವಶ್ಯವಾಗಿವೆ ಎಂದರು. ದೇಶದಲ್ಲಿ ರಾಜಕೀಯ ಅಸ್ಥಿರತೆ ಬಹಳಷ್ಟು ಗೊಂದಲವನ್ನು ಮೂಡಿಸುತ್ತಿದೆ. ಚುನಾಯಿತ ಪ್ರತಿನಿಧಿಗಳ ಕಾರ್ಯವೈಖರಿ ಇಡೀ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸಂಶಯಾಸ್ಪದವಾಗಿ ನೋಡುವಂತಾಗಿದೆ. ಆಡಳಿತಾರೂಢ ಸರ್ಕಾರಗಳು ಅಭಿವೃದ್ಧಿ ಮರೆಯುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿ ಸಮುದಾಯದ ಅಭಿವೃದ್ಧಿಯ ಕಡೆಗೆ ಚಿಂತನೆ ಶೀಲರಾಗುವಂತೆ ಕರೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕ ಎಸ್.ಜಿ. ಶಿಗ್ಗಾವಿ ಮಾತನಾಡಿದರು. ವೇದಿಕೆಯಲ್ಲಿ ಗ್ರಾಪಂ ಅಧ್ಯಕ್ಷೆ ನೀಲಮ್ಮ ಗೊರವರ, ಎಸ್.ಜಿ. ಸವದಿ, ಟಿ.ಪಿ. ರಾಮಪ್ಪ, ಬಸವರಾಜ ಕಂಬಿ, ಕೆ.ಈ. ರಾಣಿಬೆನ್ನೂರ, ಪಿ. ಪಾಪಯ್ಯ ಉಪಸ್ಥಿತರಿದ್ದರು.