ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು
ಶಿಗ್ಗಾಂವಿ: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು, ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿಗ್ಗಾಂವಿ ತಾಲೂಕು ಗೊಟಗೋಡಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಗುರುವಾರ ರಾತ್ರಿ 8ರ ಸುಮಾರಿಗೆ ಸಂಭವಿಸಿದೆ. ರಮೇಶ ನೀರಲಗಿ (35) ಮೃತ ವ್ಯಕ್ತಿ. ಇವರೊಂದಿಗೆ ನಡೆದು ಹೋಗುತ್ತಿದ್ದ ಮಾರುತಿ ಎಂಬುರವೂ ತೀವ್ರವಾಗಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿ ಹೊಡೆದ ವಾಹನ ಪರಾರಿಯಾಗಿದ್ದು, ಆಕ್ರೋಶಗೊಂಡ ನೂರಾರು ಜನರು ಹೆದ್ದಾರಿ ಮೇಲೆ ಪ್ರತಿಭಟನೆ ನಡೆಸಿದರು. ಇದರಿಂದ ಹೆದ್ದಾರಿಯ ಎರಡೂ ಕಡೆಗಳಲ್ಲಿ 2-3 ಕಿ.ಮೀ. ಉದ್ದಕ್ಕೂ ವಾಹನಗಳು ಸಾಲುಗಟ್ಟಿವೆ. ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.