ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಸುದ್ದಿ ಸಂಕ್ಷೇಪ

Mainashree
Updated On : 11 Dec 2013, 11:38 am

ಮುಂದೂಡಿದ ಕವಿವಿ ಪರೀಕ್ಷೆಗಳು
ಧಾರವಾಡ: ಮೈಸೂರು ರಾಜ ವಶಂಸ್ಥ ಹಾಗೂ ಮಾಜಿ ಸಂಸದ ಡಾ. ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ನಿಧನ ಪ್ರಯುಕ್ತ ರಾಜ್ಯ ಸರ್ಕಾರ ರಜೆ ಘೋಷಿಸಿದ್ದರ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಮೀರ ಶುಕ್ಲಾ ತಿಳಿಸಿದ್ದಾರೆ. ಅಂತೆಯೇ ಕರ್ನಾಟಕ ವಿವಿ ಕುಲಪತಿ ಪ್ರೊ.ಎಚ್.ಬಿ. ವಾಲಿಕಾರ ಅವರ ಆದೇಶದಂತೆ ಡಿ. 11ರಂದು ಕರ್ನಾಟಕ ವಿವಿಯ ವ್ಯಾಪ್ತಿಯ ಅಡಿಯಲ್ಲಿ ನಡೆಯಬೇಕಿದ್ದ ಎಲ್ಲ ಸ್ನಾತಕ(ಯು.ಜಿ.) ಪರೀಕ್ಷೆಗಳನ್ನು ಮತ್ತು ಮೌಲ್ಯಮಾಪನ ಕಾರ್ಯವನ್ನು ಮುಂದೂಡಲಾಗಿದೆ ಎಂದು ಮೌಲ್ಯಮಾಪನ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಸೌಲಭ್ಯಗಳ ಸದುಪಯೋಗ ಪಡೆಯಲಿ
ಗದಗ: ಸರ್ಕಾರವು ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಆಹಾರ ನೀಡುವ ಯೋಜನೆಯನ್ನು ಜಾರಿಗೊಳಿಸಿದ್ದು, ಶಾಲಾ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಪಂ ಸದಸ್ಯೆ ಅನ್ನಪೂರ್ಣಮ್ಮ ಡಬಾಲಿ ಹೇಳಿದರು. ಅವರು ಶುಕ್ರವಾರ ತಾಲೂಕಿನ ಅಂತೂರ ಬೆಂತೂರ ಗ್ರಾಮದ ಕೃಷ್ಣಗೌಡ ವೆಂಕನಗೌಡ ಪಾಟೀಲ ಸರ್ಕಾರಿ ಪ್ರೌಢ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಅಕ್ಷರ ದಾಸೋಹ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದರು. ಈ ಬಿಸಿಯೂಟ ಯೋಜನೆಯನ್ನು ಸರ್ಕಾರ ಜಾರಿಗೆ ತಂದು ಜ್ಞಾನದೊಂದಿಗೆ ಮಕ್ಕಳಲ್ಲಿ ಪೌಷ್ಟಿಕತೆಯನ್ನು ಹೆಚ್ಚಿಸಲು ಕಾರ್ಯಕ್ರಮ ರೂಪಿಸಿರುವುದು ಎಲ್ಲ ಮಕ್ಕಳಿಗೆ ಅನಕೂಲವಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಅಂತೂರ-ಬೆಂತೂರ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಸಾವಿತ್ರಿ ಕುರುಬರ ಮಾತನಾಡಿ, ಸರ್ಕಾರವು ಮಕ್ಕಳಿಗೆ ಸಹಕಾರಿಯಾಗಲಿ ಎಂಬ ಸದುದ್ದೇಶದಿಂದ ಹಲವು ನೂತನ ಯೋಜನೆ ಹಮ್ಮಿಕೊಳ್ಳುವ ಮೂಲಕ ಮಕ್ಕಳಿಗೆ ಶಿಕ್ಷಣದ ಜತೆಗೆ ಪೌಷ್ಠಿಕತೆ ಹೆಚ್ಚಿಸಲು ಶ್ರಮಿಸುತ್ತಿದ್ದು, ಪಾಲಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಹಾಗೂ ಪ್ರತಿದಿನ ಶಾಲೆಗೆ ಕಳುಹಿಸಲು ಮುಂದಾಗಬೇಕು. ಇದರಿಂದ ಸರ್ಕಾರವು ರೂಪಿಸಿದ ಯೋಜನೆ ಸಫಲತೆ ಸಾಧ್ಯ ಎಂದರು. ಅತಿಥಿಗಳಾಗಿ ಗದಗ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ಶಂಕರ ಹೂಗಾರ ಮತ್ತು ಜಿಲ್ಲಾ ಅಕ್ಷರ ದಾಸೋಹ ಕಾರ್ಯಕ್ರಮದ ಶಿಕ್ಷಣಾಧಿಕಾರಿ ಮಂಗಳಾ ತಾಪಸ್ಕರ ಆಗಮಿಸಿದ್ದರು. ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷ ಪ್ರಕಾಶಗೌಡ ಪಾಟೀಲ, ಶಾಲೆಯ ಮುಖ್ಯೋಪಾಧ್ಯಾಯ ಅಶೋಕ ಕುಂಬಾರ, ಗ್ರಾಪಂ ಸದಸ್ಯರು, ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು. ಎಸ್.ಸಿ.ಭಾವಿ ನಿರೂಪಿಸಿದರು. ಆರ್.ಎಸ್. ಜಾಲರಡ್ಡಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement