ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಅಬಲೂರು: 28ರಂದು 3ನೇ ಕನ್ನಡ ಸಾಹಿತ್ಯ ಸಮ್ಮೇಳನ

Lingaraj Badiger
Updated On : 13 Dec 2013, 10:59 am

ಹಿರೇಕೆರೂರು: ತಾಲೂಕಿನ ಸರ್ವಜ್ಞ ಕವಿಯ ಕರ್ಮಭೂಮಿಯಾದ ಅಬಲೂರಿನಲ್ಲಿ ತಾಲೂಕು ಮೂರನೆಯ ಕನ್ನಡ ಸಾಹಿತ್ಯ ಸಮ್ಮೇಳನ ಡಿ. 28ರಂದು ಅದ್ದೂರಿಯಾಗಿ ಜರುಗಲಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಪಿ. ಗೌಡರ ತಿಳಿಸಿದರು.
ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಾಲಯದಲ್ಲಿ ಜರುಗಿದ ಕಸಾಪ ತಾಲೂಕು ಘಟಕದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಬಲೂರಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ವಿಜೃಂಭಣೆಯಿಂದ ಆಚರಿಸಲಾಗುವುದು. ಕವಿಗೋಷ್ಠಿಯಲ್ಲಿ ಭಾಗವಹಿಸಲು ಇಚ್ಛಿಸುವ ತಾಲೂಕಿನ ಕವಿಗಳು ಕಸಾಪ ಕಾರ್ಯದರ್ಶಿ ರಾಘವೇಂದ್ರ ಹಂಚಿನಮನಿ, ಅಶೋಕ ಗೊಲ್ಲರ ಅವರಲ್ಲಿ ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ. 9901130412 ಸಂಪರ್ಕಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಮಾಜಿ ಸ್ಪೀಕರ್ ಬಿ.ಜಿ. ಬಣಕಾರ, ಡಾ೤ ಭೋಜರಾಜ ಪಾಟೀಲ, ಕೋಶಾಧ್ಯಕ್ಷ ಮಹೇಂದ್ರ ಬಡಳ್ಳಿ, ಕ್ಷೇತ್ರ ಸಮನ್ವಯಾಧಿಕಾರಿ ಎನ್. ಸುರೇಶಕುಮಾರ, ಅಶೋಕ ಹಳ್ಳಿಯವರ, ಬಸವರಾಜ ಪೂಜಾರ, ಎಲ್.ವಿ. ಕಲವೀರಪ್ಪನವರ, ಕೆ.ಎಚ್. ಕಾಟೇನಹಳ್ಳಿ, ಪ್ರಭು ಮಳವಳ್ಳಿ ಇದ್ದರು. ಕಸಾಪ ಮಾಜಿ ಅಧ್ಯಕ್ಷ ಎನ್. ಬಸವಾರಾಧ್ಯ, ದಕ್ಷಿಣ ಆಪ್ರಿಕಾದ ನೆಲ್ಸನ್ ಮಂಡೇಲಾಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement