ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಸ್ಪರ್ಧಾತ್ಮಕ ಮನೋಭಾವ ಇರಲಿ

Mainashree
Updated On : 14 Dec 2013, 10:21 am

ಹಾವೇರಿ: ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಅನಾವರಣ ಮಾಡಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಅಳವಡಿಸಿಕೊಂಡು ಸಾಧನೆ ಮಾಡಬೇಕು ಎಂದು ಜಿಪಂ ಅಧ್ಯಕ್ಷ ರಾಜೇಂದ್ರ ಹಾವೇರಣ್ಣನವರ ಹೇಳಿದರು.
ನಗರದ ಜ್ಞಾನಗಂಗಾ ಶಿಕ್ಷಣ ಸಮಿತಿಯ ಗೆಳೆಯರ ಬಳಗದ ಚನ್ನಬಸಪ್ಪ ಮಾಗಾವಿ ಪ್ರೌಢಶಾಲೆಯಲ್ಲಿ ಶುಕ್ರವಾರ ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಏರ್ಪಡಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸ್ಪರ್ಧೆ ಬಹಳ ಮಹತ್ವದ್ದು. ಸೋಲು ಗೆಲವಿಗಿಂತ ಪಾಲ್ಗೊಳ್ಳುವುದು ಮುಖ್ಯ. ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗ ಮಾಡಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು. ಮಕ್ಕಳ ಅಭಿವೃದ್ಧಿಗೆ ರೂಪಿಸಿದ ಕಾರ್ಯಕ್ರಮಗಳು ಸದ್ಬಳಕೆಯಾಗಬೇಕು ಎಂದರು.
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯ ಎಂ.ಡಿ. ಬಳ್ಳಾರಿ ಮಾತನಾಡಿ, ಮಕ್ಕಳನ್ನು ಶಾಲೆಗಳತ್ತ ಆಕರ್ಷಿಸಿ ಅವರಲ್ಲಿ ಓದು, ಬರಹ ರೂಢಿಸುವ ಹಾಗೂ ಜೀವನ ಕೌಶಲ ಬೆಳೆಸುವ ಸಲುವಾಗಿ ಪ್ರತಿಭಾ ಕಾರಂಜಿ ಹಮ್ಮಿಕೊಳ್ಳಲಾಗುತ್ತಿದೆ. ನಿರ್ಣಾಯಕರು ಅರ್ಹ ಪ್ರತಿಭೆಗಳಿಗೆ ನ್ಯಾಯ ಒದಗಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ರಾಮಶೆಟ್ಟಿ ಮಾತನಾಡಿ, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಪಠ್ಯ ಹಾಗೂ ಸಹಪಠ್ಯ ಚಟುವಟಿಕೆ ಪೂರಕವಾಗಿವೆ. ವಿದ್ಯಾರ್ಥಿಗಳು ಬೆಳೆಯಲು ನೂರಾರು ಅವಕಾಶಗಳಿದ್ದು, ಸೋಲು ಗೆಲವುವನ್ನು ಸಮಾನವಾಗಿ ಸ್ವೀಕರಿಸಿ ಮುನ್ನುಗ್ಗಬೇಕು ಎಂದರು.
ಕ್ಷೇತ್ರ ಸಮನ್ವಯಾಧಿಕಾರಿ ಕೆ.ಎಫ್. ಭಜಂತ್ರಿ, ತಾಲೂಕು ನೋಡಲ್ ಅಧಿಕಾರಿ ನಾಗರಾಜ ಕೆ.ಎಸ್., ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಎನ್.ಐ. ಇಚ್ಚಂಗಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement