ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಕೆಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮೈಲಪ್ಪ ರಾಜಿನಾಮೆ

Lingaraj Badiger
Updated On : 17 Dec 2013, 12:06 pm

ಹಾವೇರಿ: ಕರ್ನಾಟಕ ಜನತಾ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮೈಲಪ್ಪ ಗುಡುಗೂರ ರಾಜಿನಾಮೆ ಸಲ್ಲಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪಗೆ ರಾಜಿನಾಮೆ ಪತ್ರ ರವಾನಿಸಿದ್ದಾರೆ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳ ಒತ್ತಾಸೆಯಂತೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿಸಲು ಬಿಜೆಪಿಗೆ ಬೆಂಬಲ ಸೂಚಿಸಬೇಕಾಗಿದ್ದು, ಕೆಜೆಪಿಗೆ ರಾಜಿನಾಮೆ ನೀಡುತ್ತಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ. ಅದೇ ರೀತಿ ವಿಶ್ವನಾಥ ಪಾಟೀಲ, ನೀಲಪ್ಪ ದೇವರಗುಡ್ಡ, ದೇವಪ್ಪ ದಾಸರದ, ರಮೇಶ ನಾಯಕ, ನಾಗರಾಜ ಮಾಲದಾರ ಕೆಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ನಾಳೆಯಿಂದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ
ಹಾವೇರಿ: ಜಿಪಂ, ಸರ್ವ ಶಿಕ್ಷಣ ಅಭಿಯಾನ, ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಪ್ರಸಕ್ತ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ-ಸಾಂಸ್ಕೃತಿಕ, ಶೈಕ್ಷಣಿಕ ಸ್ಪರ್ಧೆಗಳು ಡಿ. 18 ಹಾಗೂ 19ರಂದು ಹುಕ್ಕೇರಿಮಠದ ಶಿವಬಸವೇಶ್ವರ ಪ್ರೌಢಶಾಲೆಯಲ್ಲಿ ಜರುಗಲಿವೆ. ಡಿ. 18ರಂದು ಬೆಳಗ್ಗೆ 10.30ಕ್ಕೆ ಶಿವಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಸಣ್ಣ ಕೈಗಾರಿಕೆ, ಮುಜರಾಯಿ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಕಾಶ ಹುಕ್ಕೇರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ರುದ್ರಪ್ಪ ಲಮಾಣಿ ಅಧ್ಯಕ್ಷತೆ, ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಶಿವಕುಮಾರ ಉದಾಸಿ, ಪ್ರಹ್ಲಾದ್ ಜೋಶಿ, ಶಾಸಕರಾದ ಕೆ.ಬಿ. ಕೋಳಿವಾಡ, ಮನೋಹರ ತಹಶೀಲ್ದಾರ, ಬಸವರಾಜ ಶಿವಣ್ಣನವರ, ಬಸವರಾಜ ಬೊಮ್ಮಾಯಿ, ಯು.ಬಿ. ಬಣಕಾರ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಸೋಮಣ್ಣ ಬೇವಿನಮರದ, ನಾಗರಾಜ ಛಬ್ಬಿ, ಜಿಪಂ ಅಧ್ಯಕ್ಷ ರಾಜೇಂದ್ರ ಹಾವೇರಣ್ಣನವರ, ಉಪಾಧ್ಯಕ್ಷೆ ಶೋಭಾ ನಿಸ್ಸೀಮಗೌಡ್ರ, ಜಿಪಂ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಸರೋಜವ್ವ ಆಡಿನ, ಜಿಲ್ಲಾಧಿಕಾರಿ ಪಾಂಡುರಂಗ ನಾಯಕ, ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಭಾರ ಅಪರ ಆಯುಕ್ತ ಪಿ.ಎ. ಮೇಘಣ್ಣನವರ, ಜಿಪಂ ಸಿಇಒ ಕೆ.ಬಿ. ಆಂಜನಪ್ಪ, ತಾಪಂ ಅಧ್ಯಕ್ಷೆ ರೀಹಾನಾ ಚಾಂದಶೇಖ, ಉಪಾಧ್ಯಕ್ಷ ಪ್ರಕಾಶ ಬಣಕಾರ, ನಗರಸಭೆ ಅಧ್ಯಕ್ಷ ಐ.ಯು. ಪಠಾಣ, ಉಪಾಧ್ಯಕ್ಷೆ ರತ್ನಾ ಭೀಮಕ್ಕನವರ, ಶಿವಲಿಂಗೇಶ್ವರ ವಿದ್ಯಾಪೀಠದ ಅಧ್ಯಕ್ಷ ಪಿ.ಡಿ. ಶಿರೂರ, ಗೌರವ ಕಾರ್ಯದರ್ಶಿ ವೀರಣ್ಣ ಅಂಗಡಿ ಭಾಗವಹಿಸುವರೆಂದು ಡಿಡಿಪಿಐ ಎಸ್.ಬಿ. ಕೊಡ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement