8500 ಪೊಲೀಸ್ ಹುದ್ದೆ ಶೀಘ್ರ ಭರ್ತಿ: ಪಚಾವೋ
ಹಾವೇರಿ: ರಾಜ್ಯ ಪೊಲೀಸ್ ಇಲಾಖೆಗೆ 8500 ಕಾನ್ಸ್ಟೇಬಲ್ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲಾಗುವುದು ಎಂದು ಡಿಜಿ ಮತ್ತು ಐಜಿಪಿ ಲಾಲ್ ರುಕ್ಮಾ ಪಚಾವೋ ತಿಳಿಸಿದರು. ಎಸ್ಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಲಾಖೆಯಲ್ಲಿ 18 ಸಾವಿರ ಕಾನ್ಸ್ಟೇಬಲ್ ಹುದ್ದೆಗಳು ಖಾಲಿಯಿವೆ. ಈ ಪೈಕಿ 8500 ಹುದ್ದೆಗಳ ನೇಮಕಕ್ಕೆ ಸರ್ಕಾರ ಮಂಜೂರಾತಿ ನೀಡಿದೆ. ಹೈದರಾಬಾದ್-ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಕಲಂ 371 (ಜೆ) ಅನುಷ್ಠಾನದಿಂದ ನೇಮಕಾತಿಯಲ್ಲಿ ವಿಶೇಷ ಮೀಸಲಾತಿ ನೀಡಲಾಗುತ್ತಿದೆ. ಕಾಯ್ದೆ ಅನುಷ್ಠಾನಗೊಂಡ ತಕ್ಷಣ ಸಿಬ್ಬಂದಿ ನೇಮಕ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು.