ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಏಡ್ಸ್ ಬಗ್ಗೆ ಜಾಗೃತಿ ಅಗತ್ಯ: ಲಮಾಣಿ

Mainashree
Updated On : 20 Dec 2013, 10:31 am

ಹಾವೇರಿ: ಜಾಗೃತಿ ಮೂಡಿಸಿ, ಏಡ್ಸ್ ಮುಕ್ತ ರಾಷ್ಟ್ರವನ್ನಾಗಿಸುವ ಕಾರ್ಯ ನಮ್ಮ ಜಿಲ್ಲೆಯಿಂದಲೇ ಆರಂಭವಾಗಲಿ ಎಂದು ಶಾಸಕ ರುದ್ರಪ್ಪ ಲಮಾಣಿ ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ವಾರ್ತಾ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಗುರುವಾರ ಏರ್ಪಡಿಸಿದ್ದ ವಿಶ್ವ ಏಡ್ಸ್ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಏಡ್ಸ್ ಪೀಡಿತರನ್ನು ವಿಶ್ವಾಸದಿಂದ ಕಾಣುವ ಜತೆಗೆ, ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವಾಗಬೇಕು. ಜಿಲ್ಲೆಗೆ ಮೆಡಿಕಲ್ ಕಾಲೇಜು, ನರ್ಸಿಂಗ್ ಕೋರ್ಸ್, ವಿದ್ಯಾರ್ಥಿನಿಯರ ವಸತಿ ನಿಲಯಗಳ ಮಂಜೂರು ಮಾಡಿಸುವುದಾಗಿ ಶಾಸಕರು ಭರವಸೆ ನೀಡಿದರು.
ನಿವೃತ್ತ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ೤ ಬಸವರಾಜ ಸಜ್ಜನ ಉಪನ್ಯಾಸ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಜಿಪಂ ಉಪಾಧ್ಯಕ್ಷೆ ಡಾ೤ ಶೋಭಾ ನಿಸ್ಸೀಮಗೌಡ್ರ ಮಾತನಾಡಿ, ಜನರಲ್ಲಿ ಜಾಗೃತಿ ಮೂಡಿಸಿದರೆ, ಏಡ್ಸ್ ಹರಡದಂತೆ ತಡೆಯುವುದು ಸಾಧ್ಯವಾಗುತ್ತದೆ ಎಂದರು.
ಮಂಗಳಾ ಏಡ್ಸ್ ಪೀಡಿತರ ಸಂಕಷ್ಟಗಳನ್ನು ವಿವರಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ೤ ಎಚ್.ಎಸ್. ರಾಘವೇಂದ್ರ ಸ್ವಾಮಿ ಪ್ರಾಸ್ತಾವಿಕ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 5020 ಜನರು ಏಡ್ಸ್ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ. ಜಿಲ್ಲೆಯಲ್ಲಿ 13 ಐಸಿಟಿಸಿ ಕೇಂದ್ರಗಳಿದ್ದು, ಈ ಕೇಂದ್ರಗಳಿಗೆ ಆಪ್ತಮಿತ್ರ ಕೇಂದ್ರಗಳೆಂದು ಕರೆಯಲಾಗುತ್ತದೆ ಎಂದು ಹೇಳಿದರು.
ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಸರೋಜವ್ವ ಆಡಿನ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ೤ ಬಿ.ಎಸ್. ಅಂಗಡಿ, ತಾಲೂಕು ಆರೋಗ್ಯಾಧಿಕಾರಿ ಡಾ೤ ಪ್ರಭಾಕರ ಕುಂದೂರ, ಫಿಜಿಷಿಯನ್ ಡಾ೤ ವಿಶ್ವನಾಥ, ಸವಣೂರು ಪುರಸಭೆ ಅಧ್ಯಕ್ಷೆ ಎಂ.ಎಸ್. ಸೌದಾಗರ, ಮೌನೇಶ ಬಡಿಗೇರ ಇದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎನ್. ಮಾಳಿಗೇರ ಸ್ವಾಗತಿಸಿದರು. ಎಫ್.ಎನ್. ಕರೇಗೌಡ್ರ ನಿರೂಪಿಸಿದರು. ಎಂ.ಕೆ. ಪಾಟೀಲ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement