ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಗುತ್ತಿಗೆ ನೌಕರರ ಪ್ರತಿಭಟನೆ

Mainashree
Updated On : 20 Dec 2013, 10:32 am

ಹಾವೇರಿ: ಗುತ್ತಿಗೆ ನೌಕರರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ ಸಮಾನವಾದ ಹುದ್ದೆಗಳಲ್ಲಿ ವಿಲೀನಗೊಳಿಸುವಂತೆ ಒತ್ತಾಯಿಸಿ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ ಗುತ್ತಿಗೆ ನೌಕರರ ಜಿಲ್ಲಾ ಸಂಘದ ಸದಸ್ಯರು ಕಪ್ಪುಬಟ್ಟೆ ಧರಿಸಿ ಗುರುವಾರ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾ ಆರೋಗ್ಯ ಭವನದ ಎದುರಿಗೆ ಪ್ರತಿಭಟನೆ ನಡೆಸಿದ ಗುತ್ತಿಗೆ ನೌಕರರು, ಆರೋಗ್ಯ ಇಲಾಖೆಯ ಅಂಗ ಸಂಸ್ಥೆಯಾದ ಏಡ್ಸ್ ಪ್ರಿವೆನ್ಶನ್ ಸೊಸೈಟಿಯಲ್ಲಿ ಕಡಿಮೆ ವೇತನದಲ್ಲಿ 10-12 ವರ್ಷಗಳಿಂದ ಎಚ್‌ಐವಿ ಮತ್ತು ಏಡ್ಸ್ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ಆದರೂ ಸರ್ಕಾರ ನಮಗೆ ಯಾವುದೇ ಸೌಲಭ್ಯ ನೀಡಿಲ್ಲ ಎಂದು ಆರೋಪಿಸಿದರು.
ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾರುತಿ ಭಜಂತ್ರಿ ಮಾತನಾಡಿ, ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಐಸಿಟಿಸಿ ವಿಭಾಗ, ಎಆರ್‌ಟಿ ವಿಭಾಗ, ಲಿಂಕ್ ಎಆರ್‌ಟಿ, ರಕ್ತನಿಧಿ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿದ್ದು, ಸರ್ಕಾರ ಸಮಾನ ಕೆಲಸಕ್ಕೆ ಸಮಾನ ವೇತನ ನೀಡದೆ ತಾರತಮ್ಯ ಮಾಡುತ್ತಿದೆ ಎಂದು ಆಪಾದಿಸಿದರು. ರಕ್ತ ಪರೀಕ್ಷೆ, ಆಪ್ತ ಸಮಾಲೋಚನೆ ಹಾಗೂ ಕಾಯಿಲೆಗೆ ಒಳಗಾದ ವ್ಯಕ್ತಿಗಳಿಗೆ ಉತ್ತಮ ಜೀವನ ನಡೆಸಲು ಆತ್ಮಸ್ಥೈರ್ಯ ತುಂಬವ ಕೆಲಸ ಮಾಡುತ್ತಿದ್ದೇವೆ. ಸರ್ಕಾರ ನಮಗೆ ಯಾವುದೇ ಸೌಲಭ್ಯ ನೀಡದೆ ಕಡಿಮೆ ವೇತನದಲ್ಲಿ ದುಡಿಸಿಕೊಳ್ಳುತ್ತ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು. ನೌಕರರಿಗೆ ಭದ್ರತೆ ಇಲ್ಲ. ಬೇರೆ ಉದ್ಯೋಗಕ್ಕೆ ಸೇರಬೇಕೆಂದರೆ ವಯೋವುತಿ ಮೀರುತ್ತಿದೆ. ಕೆಎಸ್‌ಎಪಿಎಸ್‌ನ್ನು ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ವಿಲೀನಗೊಳಿಸುವಂತೆ ಒತ್ತಾಯಿಸಿದರು.
ಶಾಸಕ ರುದ್ರಪ್ಪ ಲಮಾಣಿ, ನೌಕರರ ಬೇಡಿಕೆ ಒಳಗೊಂಡ ಮನವಿಯನ್ನು ಮುಖ್ಯಮಂತ್ರಿಗೆ ಸಲ್ಲಿಸುವ ಮೂಲಕ ಶೀಘ್ರ ಬೇಡಿಕೆ ಈಡೇರಿಸುವ ಭರವಸೆ ನೀಡಿದರು.
ಸೊಸೈಟಿ ಗುತ್ತಿಗೆ ನೌಕರರಾದ ನಾಗರಾಜ ಇಳಗೇರ, ಜಿಲಾನಿ ನವಲಗುಂದ, ಸತೀಶ ಹೊಸಮನಿ, ಡಿ.ಎನ್. ಚಂದ್ರಶೇಖರ್, ಆರ್.ಎಸ್. ರಾಮನಗೌಡ್ರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement