ಪ್ರತಿಭಾ ಕಾರಂಜಿ: ರಾಜ್ಯಮಟ್ಟಕ್ಕೆ ಆಯ್ಕೆ
ಹಿರೇಕೆರೂರು: ತಾಲೂಕಿನ ಕಡೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಮಂಜುನಾಥ ದೂಳಪ್ಪನವರ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. 2011ರಿಂದ 2013ರ ವರೆಗೆ ಈ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆಯುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಶಾಲೆಯ ವಿದ್ಯಾರ್ಥಿಗಳಾದ ಕಾವ್ಯ ದೂಳ್ಪಪನವರ 2011ರಲ್ಲಿ, ರೇಖಾ ಹೊನ್ನಾಳಿ 2012ರಲ್ಲಿ ಹಾಗೂ ಮಂಜುನಾಥ ದೂಳಪ್ಪನವರ 2013ರಲ್ಲಿ ರಾಜ್ಯ ಮಟ್ಟಕ್ಕೆ ಪ್ರತಿನಿಧಿಸಿದ ವಿದ್ಯಾರ್ಥಿಗಳಾಗಿದ್ದಾರೆ. ಇದು ತಾಲೂಕಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಸಿ. ಆನಂದ ಸಂತೋಷ ವ್ಯಕ್ತಪಡಿಸಿದ್ದಾರೆ. ಈ ಎಲ್ಲ ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ ನೀಡಿ ಪ್ರೋತ್ಸಾಹಿಸಿದ ಎಂ.ಎಂ. ಕೆರೂರ ಅವರನ್ನು ಹಾಗೂ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷರಾದ ಶಾಸಕ ಯು.ಬಿ. ಬಣಕಾರ, ಕ್ಷೇತ್ರ ಸಮನ್ವಾಯಧಿಕಾರಿ ಎನ್. ಸುರೇಶಕುಮಾರ, ದೈಹಿಕ ಶಿಕ್ಷಣ ಪರಿವೀಕ್ಷಕ ಪಿ.ಬಿ. ನಿಂಗನಗೌಡ್ರ, ಶಿಕ್ಷಣ ಸಂಯೋಜಕರಾದ ವಿ.ಸಿ. ಕೋರಿ, ಎಂ.ಡಿ. ಕುರುಬರ, ಗ್ರಾಮಸ್ಥರು ಅಭಿನಂದಿಸಿದ್ದಾರೆ.