ಅತ್ಯಾಚಾರ ಯತ್ನ: ವಿಷ ಸೇವಿಸಿದ ಮಹಿಳೆ
ಹಾವೇರಿ: ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಹಿನ್ನೆಲೆಯಲ್ಲಿ ಮನನೊಂದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿ ತಾಲೂಕಿನ ಕಳ್ಳಿಹಾಳ ಗ್ರಾಮದಲ್ಲಿ ಶನಿವಾರ ನಡೆದಿದೆ. ಇಬ್ಬರು ಮಕ್ಕಳ ತಾಯಿಯಾಗಿರುವ ಈಕೆ ಶುಕ್ರವಾರ ಕಳ್ಳಿಹಾಳ ಗ್ರಾಮದ ತನ್ನ ಮನೆಯಲ್ಲಿ ಒಬ್ಬಳೇ ಇದ್ದಾಗ, ಅದೇ ಗ್ರಾಮದ ಹೊನ್ನಪ್ಪ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ. ನೊಂದ ಮಹಿಳೆ ಶನಿವಾರ ವಿಷ ಸೇವಿಸಿದ್ದಾರೆ. ವಿಷಯ ತಿಳಿದ ಕುಟುಂಬದವರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಮಹಿಳೆ ಸ್ಥಿತಿ ಇನ್ನೂ ಚಿಂತಾಜನಕವಾಗಿದೆ. ಆರೋಪಿಯನ್ನು ಹಾವೇರಿ ಗ್ರಾಮೀಣ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.