ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಮಾಸೂರ ಬಂದ್

Vishwanath S
Updated On : 28 Dec 2013, 11:14 am

ಕನ್ನಡಪ್ರಭ ವಾರ್ತೆ, ಹಿರೇಕೆರೂರು, ಡಿ. 27
ತಾಲೂಕಿನ ಮಾಸೂರ ಗ್ರಾಮದಲ್ಲಿ ಯುವತಿಯ ಅಪಹರಣ ಹಾಗೂ ಲವ್ ಜಿಹಾದ್ ವಿರೋಧಿಸಿ ವಿವಿಧ ಹಿಂದೂ ಸಂಘಟನೆಗಳು ಮಾಸೂರು ಬಂದ್ ಮಾಡಿ, ಪ್ರತಿಭಟನೆ ನಡೆಸಿದವು. ಯುವತಿಯನ್ನು ಅಪಹರಿಸಿದ ವ್ಯಕ್ತಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಲಾಯಿತು.
ಮಾಸೂರು ಗ್ರಾಮದ ಯುವತಿಯ ವಿವಾಹ ಆಕೆಯ ಸೋದರ ಮಾವನೊಂದಿಗೆ ಡಿ, 28ರಂದು ಧರ್ಮಸ್ಥಳದಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಅನ್ಯ ಕೋಮಿನ ಯುವಕನೊಬ್ಬ ಡಿ. 24ರ ರಾತ್ರಿ ಯುವತಿಯನ್ನು ಅಪಹರಿಸಿದ್ದಾನೆ ಎಂದು ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಗ್ರಾಮದಲ್ಲಿ ಇಂಥ ಘಟನೆಗಳು ಮರುಕಳಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಸಂಘಟನೆಗಳು ಶುಕ್ರವಾರ ಪ್ರತಿಭಟನಾ ಮೆರವಣಿಗೆ ನಡೆಸಿ, ಗ್ರಾಪಂ ಆವರಣದಲ್ಲಿ ಸಭೆ ನಡೆಸಿದವು.
42 ಅಪಹರಣ
ರೈತ ಮೋರ್ಚಾ ಜಿಲ್ಲಾಧ್ಯಕ್ಷ ನಿಂಗಪ್ಪ ಚಳಗೇರಿ ಮಾತನಾಡಿ, ತಾಲೂಕಿನಲ್ಲಿ 42 ಹಿಂದೂ ಮಹಿಳೆಯರ ಅಪಹರಣ ಪ್ರಕರಣಗಳು ದಾಖಲಾಗಿವೆ. ಮಾಸೂರಲ್ಲೇ ಇಂಥ 7 ಪ್ರಕರಣಗಳು ಆಗಿವೆ. ಇದರಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಮಹಿಳೆಯರ ಮೇಲೆ ದೌರ್ಜನ್ಯ ನಡೆಯದಂತೆ ಸಮಾಜ ಜಾಗೃತವಾಗಬೇಕು. ಯುವತಿಯನ್ನು ಅಪಹರಿಸಿದ ಯುವಕನನ್ನು ಬಂಧಿಸಿ, ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಈ ಘಟನೆ ಹಿಂದೆ ಭಯೋತ್ಪಾದಕ ಚಟುವಟಿಕೆಯ ಸಾಧ್ಯತೆ ಇದೆ. ತನಿಖೆ ನಡೆಸಿ, ಕಠಿಣ ಕ್ರಮ ಜರುಗಿಸಬೇಕು. ಇಂಥ ಪ್ರಕರಣಗಳು ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕೆಂದು ಆಗ್ರಹಿಸಿದರು.
ಎಸ್ಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪ್ರತಿಭಟನೆಯಲ್ಲಿ ಹಿಂದೂ ಸಂಘಟನೆಗಳ ಮುಖಂಡರಾದ ಕುಮಾರ ಪ್ಯಾಟೇರ, ದೇವರಾಜ ಹಂಚಿನಮನಿ, ಕುಮಾರ ಹಿರೇಮಠ, ಜಿಪಂ ಮಾಜಿ ಸದಸ್ಯ, ನಾರಣಪ್ಪ ಗೌರಕ್ಕನವರ, ಗ್ರಾಪಂ ಅಧ್ಯಕ್ಷ ಚೆನ್ನಬಸ್ಸಪ್ಪ ರಾಮಜ್ಜನವರ, ಮನೋಹರ ಬೂದಿಹಾಳ, ರಾಜು ಬ್ಯಾಡಗಿ, ಸುರೇಶ ನಲ್ವಾಡಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments