ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ಹುದ್ದೆಗೆ ಆಹ್ವಾನ
ಹಾವೇರಿ: ಪುನರ್ ರಚಿತ ರಾಜ್ಯ ಬಾಲಕಾರ್ಮಿಕ ನಿರ್ಮೂಲನೆ ಕ್ರಿಯಾ ಯೋಜನೆಯ ಅನ್ವಯ ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಘದ ಅಡಿಯಲ್ಲಿ ಖಾಲಿ ಇರುವ ಒಂದು ಯೋಜನಾ ನಿರ್ದೇಶಕರ (ತಾತ್ಕಾಲಿಕ) ಹುದ್ದೆ ನೇಮಕಾತಿಗೆ ಜ. 18ರೊಳಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿ 40 ವರ್ಷದೊಳಗಿನವರಾಗಿದ್ದು, ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಎಂಎಸ್ಡಬ್ಲೂ, ಅಭಿವೃದ್ಧಿ ಅಧ್ಯಯನ, ಲಾಭರಹಿತ ಸಂಸ್ಥೆಗಳ (ಎನ್ಜಿಓ) ನಿರ್ವಹಣಾ ಶಾಸ್ತ್ರ ಸ್ನಾತಕೋತ್ತರ ಪದವಿ ಹೊಂದಿರಬೇಕು. ಸಾಮಾಜಿಕ ಕಾರ್ಯಕ್ಷೇತ್ರಗಳಲ್ಲಿ ಐದು ವರ್ಷ ಕೆಲಸ ಮಾಡಿದ ಅನುಭವ ಇರಬೇಕು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವಲ್ಲಿ ಅನುಭವ ಇದ್ದರೆ ಆದ್ಯತೆ ನೀಡಲಾಗುವುದು. ಕನ್ನಡ-ಇಂಗ್ಲಿಷ್ ಸಂವಹನ, ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಸರ್ಕಾರಿ ಕೆಲಸದಿಂದ ವಜಾಗೊಂಡಿರುವ ಅಥವಾ ನಿವೃತ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಹರಲ್ಲ. ಆಯ್ಕೆಯಾದ ಅಭ್ಯರ್ಥಿಗೆ ಪ್ರತಿ ತಿಂಗಳು ರು. 12 ಸಾವಿರ ಗೌರವಧನ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಅರ್ಜಿ ನಮೂನೆಯನ್ನು ಯೋಜನಾ ನಿರ್ದೇಶಕರು, ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಸ್ಥೆ, ಜಿಲ್ಲಾಧಿಕಾರಿಗಳ ಕಾರ್ಯಾಲಯ, ಹಾವೇರಿ ಇವರಲ್ಲಿ ಪಡೆದು, ಭರ್ತಿ ಮಾಡಿ, ದಾಖಲೆಗಳೊಂದಿಗೆ ಜ. 18ರೊಳಗೆ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಸ್ಥೆ, ಹಾವೇರಿ ಇವರಿಗೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.