ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಕೃಷಿಯಿಂದ ಆಹಾರ ಭದ್ರತೆ ಸಾಧ್ಯ: ಹಂಚಿನಾಳ

Lingaraj Badiger
Updated On : 5 Feb 2013, 11:44 am

ಹಾವೇರಿ: ಇಂದಿನ ದಿನಮಾನಗಳಲ್ಲಿ ಸಾಮಾಜಿಕ, ಆರ್ಥಿಕ, ರಾಜಕೀಯ ಭದ್ರತೆಗಳಿಗೆ ಮೂಲ ಆಹಾರ ಭದ್ರತೆ. ಅದು ಕೃಷಿಯಿಂದ ಮಾತ್ರವೇ ಸಾಧ್ಯವೆಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್.ಆರ್. ಹಂಚಿನಾಳ ಅಭಿಪ್ರಾಯಪಟ್ಟರು. ಇಲ್ಲಿನ ಹೊಸಮಠದ ಆವರಣದಲ್ಲಿ ಸೋಮವಾರ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಕೃಷಿ ಇಲಾಖೆ, ಪಶು ಸಂಗೋಪನಾ ಇಲಾಖೆ, ತೋಟಗಾರಿಕಾ ಇಲಾಖೆ, ಜಲಾನಯನ ಇಲಾಖೆ, ಧಾರವಾಡ ಸಹಕಾರಿ ಹಾಲು ಒಕ್ಕೂಟ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹೊಸಮಠದ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಜಿಲ್ಲಾ ಕೃಷಿ ಉತ್ಸವ, ಜಾನುವಾರು ಮೇಳ, ಫಲಪುಷ್ಪ ಪ್ರದರ್ಶನದಲ್ಲಿ ಮಾತನಾಡಿದರು. ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾಶರಣರು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸಮಾಜ ಪರಿವರ್ತನೆಯಲ್ಲಿ ಶ್ರಮದ ಪಾತ್ರ ಮಹತ್ವದ್ದಾಗಿದೆ ಎಂದರು. ಕೃಷಿ ಇಲಾಖೆಯ ಮಾಹಿತಿ ಕೈಪಿಡಿಯನ್ನು ಜಿಪಂ ಅಧ್ಯಕ್ಷ ಶಂಕ್ರಣ್ಣ ಮಾತನವರ ಹಾಗೂ ಮುರುಘಾಶರಣರು ಬಿಡುಗಡೆ ಮಾಡಿದರು. ಇದೇ ಸಂದರ್ಭದಲ್ಲಿ ಉತ್ತಮ ರಾಸುಗಳ ಲಾಲನೆ ಪಾಲನೆ ಮಾಡುವವರಿಗೆ ಪುರಸ್ಕರಿಸಲಾಯಿತು. ಕೂಡಲದ ಗುರುನಂಜೇಶ್ವರ ಶ್ರೀಗಳು, ಹೊಸಮಠದ ಬಸವಶಾಂತಲಿಂಗ ಶ್ರೀಗಳು, ಎಪಿಎಂಸಿ ಅಧ್ಯಕ್ಷ ಶೇಖಣ್ಣ ಗಿರಿಗೌಡ್ರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಂದ್ರ ಕಟಕೋಳ, ಜಿಲ್ಲಾಧಿಕಾರಿ ಎಚ್.ಜಿ.ಶ್ರೀವರ, ಜಿಪಂ ಸಿಇಓ ಉಮೇಶ ಕುಸುಗಲ್ಲ, ಪಶು ಸಂಗೋಪನ ಇಲಾಖೆ ಉಪನಿರ್ದೇಶಕ ಶಿವರಾಂ ಭಟ್, ಜಲಾನಯನ ಅಧಿಕಾರಿ ಮಂಜುನಾಥ, ಸಾವಯವ ಕೃಷಿಕ ಚನ್ನಬಸಪ್ಪ ಕೊಂಬಳಿ, ಶಿವಕುಮಾರ ತಾವರಗಿ, ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement