ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಮತದಾನದ ಪಾವಿತ್ರ್ಯ ಅರಿಯಿರಿ: ಮಹಿಮಾ

Parashurama
Updated On : 8 Feb 2013, 11:13 am

ಕನ್ನಡಪ್ರಭ ವಾರ್ತೆ, ಹಾವೇರಿ, ಫೆ.7
ಮತದಾನದ ಪಾವಿತ್ರ್ಯ ಕಾಪಾಡಲು ಜನಪ್ರತಿನಿಧಿಗಳು ಮುಂದಾದರೆ ಮಾತ್ರ ಸಮಾಜ ಸುಧಾರಣೆಯಾಗಲು ಸಾಧ್ಯವಿದೆ ಎಂದು ಮಾಜಿ ಶಾಸಕ ಮಹಿಮಾ ಪಟೇಲ್ ಅಭಿಪ್ರಾಯಪಟ್ಟರು.
ನಗರದ ಎಸ್‌ಜೆಎಂ ಪದವಿಪೂರ್ವ ಕಾಲೇಜಿನಲ್ಲಿ ಲಿಂ. ನೈಘಂಟಿನ ಸಿದ್ದಬಸವ ಮುರುಘರಾಜೇಂದ್ರ ಶ್ರೀಗಳ ಹಾಗೂ ಅಥಣಿ ಮುರುಘೇಂದ್ರ ಶ್ರೀಗಳ ಸ್ಮರಣೋತ್ಸವದ ಅಂಗವಾಗಿ ಏರ್ಪಡಿಸಿದ್ದ ಶರಣ ಸಂಸ್ಕೃತಿ ಉತ್ಸವದಲ್ಲಿ ಡಾ೤ ಶಿಮುಶ ಪ್ರಶಸ್ತಿ ಪ್ರ್ಟಜನ ಹಾಗೂ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಮಾಜದಲ್ಲಿ ರಾಜಕಾರಣಿಗಳ ಪಾತ್ರ ಮಹತ್ತರವಾಗಿದೆ. ಚುನಾವಣೆ ಪ್ರಾಮಾಣಿಕವಾಗಿ ನಡೆದರೆ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗಲು ಸಾಧ್ಯ. ಆಳುವುದೇ ಅಧಿಕಾರ ಎಂದಾಗದೆ ಜವಾಬ್ದಾರಿಯುತವಾಗಿ ಜನರಿಗೆ ಉತ್ತಮ ಸೇವೆ ಸಲ್ಲಿಸಬೇಕು ಎಂದು ತಿಳಿಸಿದರು.
ಮಾಜಿ ಶಾಸಕ ನೆಹರೂ ಓಲೇಕಾರ ಮಾತನಾಡಿ, ಪ್ರತಿಯೊಬ್ಬರೂ ತಾವು ಮತದಾನ ಮಾಡುತ್ತಿರುವ ವ್ಯಕ್ತಿ ಎಂಥವರು ಎಂಬ ಅರಿವು ಹೊಂದಿರಬೇಕು. ಹಣ, ಹೆಂಡಕ್ಕಾಗಿ ಮತ ಮಾರಿಕೊಳ್ಳದೆ, ಸಮಸ್ಯೆ ನಿವಾರಿಸುವ ಸಾಮರ್ಥ್ಯ ಇರುವ ವ್ಯಕ್ತಿಯನ್ನು ಆಯ್ಕೆ ಮಾಡಬೇಕು. ಶಾಸಕನಾದವನು ತನ್ನ ಕ್ಷೇತ್ರದ ಸಮಸ್ಯೆಯ ಸಮಗ್ರ ಅರಿವನ್ನು ಹೊಂದಿರಬೇಕು.
ಜನರಲ್ಲೂ ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಹೊಸಮಠ ಶರಣ ಸಂಸ್ಕೃತಿ ಉತ್ಸವದ ಮೂಲಕ ಮಾಡುತ್ತಿರುವುದು ಸ್ವಾಗತಾರ್ಹ ಎಂದರು.
ವೇದಿಕೆಯಲ್ಲಿ ರಾಜ್ಯ ಜೆಡಿಎಸ್ ಯುವಘಟಕದ ಅಧ್ಯಕ್ಷ ಮಧು ಬಂಗಾರಪ್ಪ, ಹಾಸ್ಯ ನಟ ಮಂಡ್ಯ ರಮೇಶ್, ಸಿ.ಬಿ. ಯಲಿವಾಳ ಉಪಸ್ಥಿತರಿದ್ದರು. ಬಸವರಾಜ ಅರಬಗೊಂಡ ಸ್ವಾಗತಿಸಿದರು. ಜಿ.ಟಿ. ಪ್ರದೀಪಕುಮಾರ ನಿರ್ವಹಿಸಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments