ಶುಶ್ರೂಷಕಿಯರ ಪ್ರಮಾಣವಚನ ಸ್ವೀಕಾರ
ಹಾವೇರಿ: ಸರ್ಕಾರಿ ಶುಶ್ರೂಷಾ ಶಾಲೆ, ಸರ್ಕಾರಿ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಉದ್ಘಾಟನೆ, ವಿದ್ಯಾರ್ಥಿನಿಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಜರುಗಿತು. ಜಿಲ್ಲಾಧಿಕಾರಿ ಎಚ್.ಜಿ. ಶ್ರೀವರ ಮಾತನಾಡಿ, ಶುಶ್ರೂಷಕಿಯರ ಸೇವೆ ಮಹತ್ವದಾಗಿದ್ದು, ಕರ್ತವ್ಯದಲ್ಲಿ ನಿಷ್ಠೆಯಿಂದ ತೊಡಗಿಕೊಳ್ಳುವಂತೆ ತಿಳಿಸಿದರು. ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ ಎಸ್.ಎನ್. ಮರೆಕ್ಕನವರ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಸ್ಥಾನಿಕ ವೈದ್ಯಾಧಿಕಾರಿ ಡಾ ಬಿ.ಎಸ್. ಮಾಶಾಳ, ಜಿಲ್ಲಾ ಯೋಜನಾ ನಿರ್ವಾಹಣಾಧಿಕಾರಿ ಡಾ ಎಂ. ಜಯಾನಂದ, ಡಾ ಮುರಳೀಧರ ಹಾಗೂ ಶುಶ್ರೂಷಾಧೀಕ್ಷಕ ಎಂ.ಎಚ್. ಮುಲ್ಲಾ ಪಾಲ್ಗೊಂಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.