ಪೈಪ್ಲೈನ್, ಮೋಟಾರ್ ದುರಸ್ತಿಗೆ ಅನುದಾನ
ಕನ್ನಡಪ್ರಭ ವಾರ್ತೆ, ಹಾವೇರಿ, ಫೆ.10
ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ವಿವಿಧ ಗ್ರಾಮಗಳ ಕುಡಿಯುವ ನೀರಿನ ಪೈಪ್ಲೈನ್ ಹಾಗೂ ಮೋಟಾರ್ ದುರಸ್ತಿ ಕಾಮಗಾರಿಗಳಿಗೆ ಹಾವೇರಿ ತಾಲೂಕಿಗೆ ರು. 21.97 ಲಕ್ಷ ಅನುದಾನವನ್ನು ಜಿಲ್ಲಾಧಿಕಾರಿ ಬಿಡುಗಡೆ ಮಾಡಿದ್ದಾರೆ.
ತಾಲೂಕಿನ ಯಲಗಚ್ಚಗೆ ರು. 2ಲಕ್ಷ, ಗಣಜೂರಿಗೆ ರು. 4.99 ಲಕ್ಷ, ಗುತ್ತಲಕ್ಕೆ ರು. 7.98 ಲಕ್ಷ, ಗುತ್ತಲ ತಾಂಡಾಕ್ಕೆ ರು. 2 ಲಕ್ಷ ಹಾಗೂ ಶಿರಮಾಪುರ ಗ್ರಾಮಕ್ಕೆ ರು. 5ಲಕ್ಷವನ್ನು ಪಂಚಾಯತ್ ರಾಜ್ ಎಂಜಿನೀಯರಿಂಗ್ ವಿಭಾಗಕ್ಕೆ ಬಿಡುಗಡೆ ಮಾಡಲಾಗಿದೆ. ಹಾವೇರಿ ನಗರಕ್ಕೆ ಕುಡಿಯುವ ನೀರು ಒದಗಿಸುವ ತುಂಗಭದ್ರಾ ನದಿಗೆ ತಾತ್ಕಾಲಿಕ ಮರಳಿನ ಬಾಂದಾರು ನಿರ್ಮಾಣ ಕಾಮಗಾರಿಗೆ ರು. 6.80 ಲಕ್ಷ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.