ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಪ್ರತಿಭಾನ್ವಿತರಿಗೆ ದೇಸಾಯಿ, ಚನ್ನಮ್ಮ ಶಾಲೆ ಅವಕಾಶ

Parashurama
Updated On : 11 Feb 2013, 12:28 pm

ಹಾವೇರಿ: ಜಿಲ್ಲೆಯ ಮೊರಾರ್ಜಿ ದೇಸಾಯಿ ಹಾಗೂ ಕಿತ್ತೂರು ರಾಣಿ ಚನ್ನಮ್ಮ ಮಾದರಿ ವಸತಿ ಶಾಲೆಗಳಲ್ಲಿ 6ರಿಂದ 12ನೇ ತರಗತಿವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಈ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮ ವಿದ್ಯಾಭ್ಯಾಸ ನೀಡಲಾಗುತ್ತದೆ. ಈ ಶಾಲೆಗಳಲ್ಲಿ ಸಾಮಾನ್ಯ ವರ್ಗ, ಪ. ಜಾತಿ, ಪ. ಪಂಗಡ, ಹಿಂದುಳಿದ ವರ್ಗ ಮತ್ತು ಅಂಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರವೇಶ ಲಭ್ಯವಿದೆ.
ಪ. ಜಾತಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ರು. 1ಲಕ್ಷ, ಪ. ಪಂಗಡದವರಿಗೆ ರು. 1.45 ಲಕ್ಷ ಹಾಗೂ ಹಿಂದುಳಿದ ವರ್ಗದವರಿಗೆ ರು. 44, 500ಗಳ ಆದಾಯ ಮಿತಿ ಇರುತ್ತದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಶೇ. 50ರಷ್ಟು ಸೀಟುಗಳು ವಿದ್ಯಾರ್ಥಿನಿಯರಿಗೆ ಮತ್ತು ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ವಸತಿ ಶಾಲೆಗಳಲ್ಲಿ ನೂರಕ್ಕೆ 100ರಷ್ಟು ಸೀಟುಗಳು ವಿದ್ಯಾರ್ಥಿನಿಯರಿಗೆ ಮೀಸಲಾಗಿವೆ. ಒಮ್ಮೆ ಈ ವಸತಿ ಶಾಲೆಗಳಿಗೆ 6ನೇ ತರಗತಿಗೆ ವಿದ್ಯಾರ್ಥಿ ಸೇರಿದಲ್ಲಿ 12ನೇ ತರಗತಿವರೆಗೆ ಉಚಿತ ವಿದ್ಯಾಭ್ಯಾಸ ಮಾಡಬಹುದಾಗಿದೆ.
ಈ ವಸತಿ ಶಾಲೆಗಳಲ್ಲಿ 2003-04ನೇ ಸಾಲಿನಲ್ಲಿ 6ನೇ ತರಗತಿ 50 ವಿದ್ಯಾರ್ಥಿಗಳನ್ನು ಮಾತ್ರ ಸೇರಿಸಿಕೊಳ್ಳಲಾಗುವುದು. ಪ್ರಸ್ತುತ ಕರ್ನಾಟಕದ ಯಾವುದೇ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮತ್ತು ಈಗಾಗಲೇ ಮಾಡಿರುವ ಅರ್ಹ ವಿದ್ಯಾರ್ಥಿಗಳು ಜಿಲ್ಲೆಯಲ್ಲಿರುವ 15 (14ಆಂಗ್ಲ ಮಾಧ್ಯಮ ಹಾಗೂ 1 ಕನ್ನಡ ಮಾಧ್ಯಮ) ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ 6 ಕಿತ್ತೂರು ರಾಣಿಚನ್ನಮ್ಮ ಬಾಲಕಿಯರ ವಸತಿ (ಆಂಗ್ಲ ಮಾಧ್ಯಮ) ಶಾಲೆಗಳ ಪ್ರವೇಶ ಪರೀಕ್ಷೆಗಾಗಿ ಫೆ. 25ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರವೇಶ ಪರೀಕ್ಷೆ ಜಿಲ್ಲೆಯ ಆಯಾ ತಾಲೂಕು ಕೇಂದ್ರಗಳಲ್ಲಿ ಮಾ. 24ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1.30ರ ವರೆಗೆ ಜರುಗಲಿದೆ. ಏ. 8ರಂದು ಅರ್ಹತಾ ಪಟ್ಟಿ ಪ್ರಕಟಿಸಲಾಗುವುದು. ಏ. 22ರಿಂದ ಜೂ. 8ರ ವರೆಗೆ ಜಿಲ್ಲಾ ಮಟ್ಟದ ಕೌನ್ಸಿಲಿಂಗ್ ಜರುಗಲಿದೆ. ಅರ್ಜಿ ನಮೂನೆಗಳನ್ನು ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿಸಿಎಂ ವಿಸ್ತರಣಾಧಿಕಾರಿಗಳ ಕಚೇರಿ, ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ವಸತಿ ಶಾಲೆಗಳಲ್ಲಿ ಪಡೆಯಬಹುದೆಂದು ಜಿಲ್ಲಾ ಮಟ್ಟದ ಪ್ರವೇಶ ಪರೀಕ್ಷಾ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಎಚ್.ಜಿ. ಶ್ರೀವರ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments