ಮಕ್ಕಳ ಪ್ರಗತಿಗೆ ಸೇವಾದಳ ಶ್ರಮ
ಕನ್ನಡಪ್ರಭ ವಾರ್ತೆ, ಶಿಗ್ಗಾಂವಿ, ಫೆ. 10
ಮಕ್ಕಳಲ್ಲಿ ಶಿಸ್ತು ಹಾಗೂ ರಾಷ್ಟ್ರ ಪ್ರೇಮ ಬೆಳೆಸುವಲ್ಲಿ ಭಾರತ ಸೇವಾದಳದ ಪಾತ್ರ ಮುಖ್ಯವಾಗಿದೆ. ಎಲ್ಲ ಶಾಲೆಗಳಲ್ಲಿ ಭಾರತ ಸೇವಾದಳದ ಘಟಕಗಳನ್ನು ಸ್ಥಾಪಿಸಿ ರಾಷ್ಟ್ರೀಯ ಭಾವೈಕ್ಯವನ್ನು ಚಿಕ್ಕಂದಿನಲ್ಲೇ ಮೂಡಿಸಲು ಭಾರತ ಸೇವಾದಳ ಶ್ರಮಿಸುತ್ತಿದೆ ಎಂದು ತಾಪಂ ಅಧ್ಯಕ್ಷೆ ಉಷಾ ಶಿವಾನಂದ ಬಿಳಿಕುದರಿ ಶ್ಲಾಘಿಸಿದರು.
ತಾಲೂಕಿನ ಕುಂದೂರು ಗ್ರಾಮದಲ್ಲಿ ಭಾರತ ಸೇವಾದಳದ ತಾಲೂಕು ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆಯನ್ನು ಕುಂದೂರ ಗ್ರಾಪಂ ಅಧ್ಯಕ್ಷೆ ಚನ್ನವ್ವ ಜಾಡರ ವಹಿಸಿದ್ದರು. ಜಿಪಂ ಸದಸ್ಯ ಶಶಿಧರ ಹೊನ್ನಣ್ಣನವರ, ತಾಪಂ ಸದಸ್ಯೆ ಶಾಂತಮ್ಮ ಬೊಮ್ಮನಹಳ್ಳಿ, ವಿಶ್ವನಾಥ ಹರವಿ, ಎಸ್.ಎಫ್. ಮಸಳಿ, ಇತರರು ಹಾಜರಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.