ವೈದ್ಯರ ಮುಷ್ಕರ: ಜಿಲ್ಲಾಸ್ಪತ್ರೆ ಬಿಕೋ
ಹಾವೇರಿ: ಸರ್ಕಾರಿ ವೈದ್ಯರ ಮುಷ್ಕರದಿಂದ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳು ಪರದಾಡುವಂತಾಗಿದೆ. ವೈದ್ಯರ ಮುಷ್ಕರದ ಮಾಹಿತಿ ಮೊದಲೇ ನೀಡಿದ್ದರಿಂದ ಆಸ್ಪತ್ರೆಗೆ ಬಂದ ರೋಗಿಗಳ ಸಂಖ್ಯೆ ಇಳಿಮುಖವಾಗಿತ್ತು. ಅಗತ್ಯ ಚಿಕಿತ್ಸೆಗೆ ತೊಂದರೆಯಾಗದಂತೆ ವೈದ್ಯರು ಎಚ್ಚರಿಕೆ ವಹಿಸಿದ್ದಾರೆ. ಭಾನುವಾರ ಆಗಿದ್ದರಿಂದ ವೈದ್ಯರಿಗಾಗಿ ರೋಗಿಗಳು ಕಾಯದೆ ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡಿದರು. 250 ಹಾಸಿಗೆ ಸಾಮರ್ಥ್ಯದ ಜಿಲ್ಲಾಸ್ಪತ್ರೆಯಲ್ಲಿ ಸುಮಾರು 40 ರೋಗಿಗಳಷ್ಟೇ ಕಂಡುಬಂದರು. ಇದು ಎಂದಿನ ಸಂಖ್ಯೆಯ ಶೇ. 10 ಮಾತ್ರ ಎಂಬುದು ಗಮನಾರ್ಹವಾಗಿತ್ತು. ಆಸ್ಪತ್ರೆಗೆ ಬಂದ ರೋಗಿಗಳಿಗೆ ಬೇರೆಡೆ ಚಿಕಿತ್ಸೆ ಪಡೆಯುವಂತೆ ಸೂಚಿಸಲಾಯಿತು. ಶನಿವಾರ ಜಿಲ್ಲಾಸ್ಪತ್ರೆಗೆ ಬಂದ ರೋಗಿಗಳಿಗೆ ವೈದ್ಯೋಪಚಾರ ಮಾಡಲಾಗಿತ್ತು. ಭಾನುವಾರ ಬೆಳಗಿನಿಂದ ರೋಗಿಗಳನ್ನು ದಾಖಲು ಮಾಡಿಕೊಳ್ಳುತ್ತಿಲ್ಲ. ವೈದ್ಯರ ಮುಷ್ಕರಕ್ಕೆ ಬೆಂಬಲ ಸೂಚಿಸಲು ಬಹುತೇಕ ತಜ್ಞ ವೈದ್ಯರು ಬೆಂಗಳೂರಿಗೆ ತೆರಳಿದ್ದು, ಕೆಲವೇ ಸಿಬ್ಬಂದಿ ಸೇವೆ ಸಲ್ಲಿಸುತ್ತಿರುವುದಾಗಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಎನ್. ಮರೆಕ್ಕನವರ ಮಾಹಿತಿ ನೀಡಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.