ಇಂದಿನಿಂದ ಸಚಿವ ಬೊಮ್ಮಾಯಿ ಪ್ರವಾಸ
ಹಾವೇರಿ: ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಫೆ. 12ರಂದು ಬೆಳಗ್ಗೆ 5.30ಕ್ಕೆ ಹುಬ್ಬಳ್ಳಿಗೆ ಆಗಮಿಸುವರು. ಬೆಳಗ್ಗೆ 10ಕ್ಕೆ ಹುಬ್ಬಳ್ಳಿಯಿಂದ ಹೊರಟು, 11ಕ್ಕೆ ಸವಣೂರಿಗೆ ಆಗಮಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.
ಮಧ್ಯಾಹ್ನ 1ಕ್ಕೆ ಶಿಗ್ಗಾಂವಿಯಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ, 1.15ಕ್ಕೆ ದುರ್ಗಾದೇವಿ ಮೂರ್ತಿ ಪ್ರಾಣಪ್ರತಿಷ್ಠಾಪನೆ ಮತ್ತು ಕಳಸಾರೋಹಣ, ಸಮುದಾಯ ಭವನದ ಉದ್ಘಾಟನೆ, ಗುರು ಸಿದ್ಧರಾಮೇಶ್ವರವರ 840ನೇ ಜಯಂತ್ಯುತ್ಸವ ಹಾಗೂ ಶಿಗ್ಗಾಂವಿ-ಸವಣೂರು ತಾಲೂಕು ಭೋವಿ(ವಡ್ಡರ) ಸಮಾಜದ ಬೃಹತ್ ಸಮಾವೇಶದಲ್ಲಿ ಭಾಗವಹಿಸುವರು.
ಮಧ್ಯಾಹ್ನ 3.30ಕ್ಕೆ ತಡಸದಲ್ಲಿ ಜೈನ ಸಮಾಜದ ಭಗವಾನ ಆದಿನಾಥ ಪಂಚಕಲ್ಯಾಣ ಪ್ರತಿಷ್ಠಾನ ಮಹೋತ್ಸವ ಹಾಗೂ ಧಾರ್ಮಿಕ ಸಭೆಯಲ್ಲಿ ಭಾಗವಹಿಸುವರು. ಸಂಜೆ 4.30ಕ್ಕೆ ಕಮಲಾನಗರ ತಾಂಡಾದಲ್ಲಿ ಸೇವಾಲಾಲ ಕ್ರಿಕೆಟ್ ಕ್ಲಬ್ ಪಂದ್ಯಾವಳಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಬೆಳಗಾವಿಗೆ ತೆರಳಿ, ಖಾಸಗಿ ಸಮಾರಂಭದಲ್ಲಿ ಭಾಗವಹಿಸಿ, ಬೆಳಗಾವಿಯಲ್ಲಿ ವಾಸ್ತವ್ಯ ಮಾಡುವರು. ಫೆ. 13ರಂದು ಬೆಳಗ್ಗೆ 9ಕ್ಕೆ ಬೆಂಗಳೂರಿಗೆ ತೆರಳುವರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.