ಮನ ಸೆಳೆದ ರಂಗೋಲಿ ಸ್ಪರ್ಧೆ
ಕನ್ನಡಪ್ರಭ ವಾರ್ತೆ, ಹಿರೇಕೆರೂರು, ಫೆ.11
ತಾಲೂಕಿನ ಕುಡುಪಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಏರ್ಪಡಿಸಲಾಗಿದ್ದ ರಂಗೋಲಿ ಸ್ಪರ್ಧೆಯಲ್ಲಿ 50 ಮಕ್ಕಳು ವೈವಿಧ್ಯಮಯ ರಂಗವಲ್ಲಿ ಬಿಡಿಸಿದರು.
ಶಾಲೆಯಲ್ಲಿ ವಾರದಲ್ಲಿ ಒಂದು ದಿನ ಈ ಬಗೆಯ ಪಠ್ಯೇತರ ಚಟುವಟಿಕೆ ಏರ್ಪಡಿಸುತ್ತಿರುವುದು ವಿಶೇಷ. ಶಾಲೆಯ ಶಿಕ್ಷಕರೇ ಬಹುಮಾನಗಳ ಪ್ರಾಯೋಜಕರು.
ವಾರಕ್ಕೊಬ್ಬ ಶಿಕ್ಷಕರು ವಿದ್ಯಾರ್ಥಿಗಳಿಗೆ ಅಗತ್ಯ ಸಾಮಗ್ರಿಗಳ ರೂಪದಲ್ಲಿ ಬಹುಮಾನ ನೀಡುತ್ತಾರೆ. ಈ ಶಾಲೆಯಲ್ಲಿ 350ಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಮಕ್ಕಳ ಸೃಜನಶೀಲತೆ ಹಾಗೂ ಕ್ರಿಯಾಶೀಲತೆ ಹೆಚ್ಚಿಸಲು ಇಂಥ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮುಖ್ಯಶಿಕ್ಷಕ ಆರ್.ಟಿ. ಹೊಸಮನಿ ಹಾಗೂ ವಿ.ವಿ. ದೊಡ್ಡಗೌಡ್ರ ತಿಳಿಸಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು, ಗ್ರಾಮದ ಪ್ರಮುಖರು, ಎಸ್‌ಡಿಎಂಸಿ ಅಧ್ಯಕ್ಷ ಕೆ.ಎಚ್. ಕುಸಗೂರ, ಸದಸ್ಯರಾದ ಎಸ್.ಎಸ್. ದೊಡ್ಡಮನಿ, ಎಸ್.ಎಚ್. ಪುರುಷೋತ್ತಮ, ಪಿ.ಎಚ್. ಮೇದೂರ ಇನ್ನಿತರರು ಉಪಸ್ಥಿತರಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.