ನಾಳೆಯಿಂದ ಸರ್ವಜ್ಞ ಸ್ಫೂರ್ತಿ ಉತ್ಸವ
ಹಿರೇಕೆರೂರು: ತಾಲೂಕಿನ ರಟ್ಟಿಹಳ್ಳಿ ಕಬ್ಬಿಣಕಂತಿಮಠದದಲ್ಲಿ ಫೆ. 15 ಹಾಗೂ 16ರಂದು 2 ದಿನಗಳ ಕಾಲ ತಾಲೂಕು ಮಟ್ಟದ ಸರ್ವಜ್ಞ ಸ್ಫೂರ್ತಿ ಉತ್ಸವ- 2013ರನ್ನು ಮಠದ ಸಭಾಭವನದಲ್ಲಿ ಆಚರಿಸಲಾಗುವುದು. ತನ್ನಿಮಿತ್ತ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಫೆ. 15ರಂದು ಉದ್ಘಾಟನಾ ಸಮಾರಂಭ ಜರುಗುವುದು. ಕಬ್ಬಿಣಕಂತಿಮಠದ ಶಿವಲಿಂಗ ಶ್ರೀಗಳು ಸಾನ್ನಿಧ್ಯ ವಹಿಸುವರು. ಡಿಡಿಪಿಐ ಎಸ್.ಬಿ. ಕೊಡ್ಲಿ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಬಿ.ಸಿ. ಪಾಟೀಲ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷ ಗಿರೀಶ ಪಾಟೀಲ, ಮಾಜಿ ಶಾಸಕ ಮಹಿಮಾ ಪಾಟೀಲ, ತಾಪಂ ಅಧ್ಯಕ್ಷೆ ಗದಿಗೆವ್ವ ಬಿದರಿ, ಹೃದಯರೋಗ ತಜ್ಞ ಪೃಥ್ವಿರಾಜ ಪಾಟೀಲ, ಇನ್ನಿತರರು ಉಪಸ್ಥಿತರಿರುವರು.
16ರಂದು ಸಂಜೆ 4ಕ್ಕೆ ಸಮಾರೋಪ ಸಮಾರಂಭ ಜರುಗಲಿದೆ. ಹಣ್ಣಿ ಹಿರೇಮಠದ ಶಿವಾನಂದ ಶ್ರೀಗಳು ಸಾನ್ನಿಧ್ಯ ವಹಿಸುವರು. ಮಾಜಿ ಸ್ಪಿಕರ್ ಬಿ.ಜಿ. ಬಣಕಾರ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಸಂಶೋಧಕ ಡಾ. ಭೋಜರಾಜ ಪಾಟೀಲ, ವಿಪ ಸದಸ್ಯರಾದ ಮೋಹನ ಲಿಂಬಿಕಾಯಿ, ಶಿವರಾಜ ಸಜ್ಜನರ, ಜಿಪಂ ಸದಸ್ಯೆ ಶಾಂತಮ್ಮ ಹಾದಿಮನಿ, ಜಿಪಂ ಸಿಓ ಉಮೇಶ ಕುಸುಗಲ್ಲ, ತಹಸೀಲ್ದಾರ್ ಟಿ.ಬಿ. ಹೊಸೂರು, ಬಿಇಓ ಎಂ.ಸಿ. ಆನಂದ, ಇತರರು ಪಾಲ್ಗೊಳ್ಳುವರು. ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗವವು ಎಂದು ಪ್ರಕಟಣೆ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.