ಸರ್ಕಾರಿ ಕಾರ್ಯಕ್ರಮವಾಗಿ ಶಿವಾಜಿ ಜಯಂತಿ: ಸಂತಸ
ಹಾನಗಲ್ಲ: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವಾಗಿ ಫೆ. 19ರಂದು ಆಚರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದು ಸ್ವಾಗತಾರ್ಹ ಎಂದು ಕ್ಷತ್ರೀಯ ಮರಾಠಾ ಮಹಾ ಒಕ್ಕೂಟ ರಾಜ್ಯ ಘಟಕದ ಉಪಾಧ್ಯಕ್ಷ ಯಲ್ಲಪ್ಪ ಕಿತ್ತೂರ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರತಿವರ್ಷ ಏಪ್ರಿಲ್ 23ರಂದು ಶಿವಾಜಿ ಮಹಾರಾಜರ ಜಯಂತಿಯನ್ನು ರಾಜ್ಯದಲ್ಲಿ ಆಚರಿಸಲಾಗುತ್ತಿತ್ತು. ಆದರೆ, ಮಹಾರಾಷ್ಟ್ರ ಹಾಗೂ ಕೇಂದ್ರ ಸರ್ಕಾರವು ಪ್ರತಿವರ್ಷ ಫೆ. 19ರಂದು ಜಯಂತಿ ಆಚರಿಸುವುದನ್ನು ಅನ್ವಯಿಸಿಕೊಂಡ ರಾಜ್ಯ ಸರ್ಕಾರದ ಆದೇಶದ ಪ್ರಕಾರ ರಾಜ್ಯದ ಕ್ಷತ್ರಿಯ ಸಮಾಜ ಬಾಂಧವರು ಇನ್ಮುಂದೆ ಪ್ರತಿವರ್ಷ ಫೆ. 19ರಂದು ಛತ್ರಪತಿ ಶಿವಾಜಿ ಜಯಂತಿ ಆಚರಿಸುವಂತೆ ಕರೆ ನೀಡಿದ್ದಾರೆ.