ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಸ್ಥಳೀಯ ಸಂಸ್ಥೆ ಚುನಾವಣಾ ವೇಳಾಪಟ್ಟಿ ಪ್ರಕಟ

Parashurama
Updated On : 15 Feb 2013, 12:15 pm

ಕನ್ನಡಪ್ರಭ ವಾರ್ತೆ, ಹಾವೇರಿ, ಫೆ.14
ರಾಜ್ಯ ಚುನಾವಣಾ ಆಯೋಗದ ಸೂಚನೆಯಂತೆ, ಹಾವೇರಿ ಜಿಲ್ಲೆಯಲ್ಲಿರುವ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಿಗೆ ಮಾ. 7ರಂದು ಗುರುವಾರ ಚುನಾವಣೆ ಜರುಗಲಿದೆ.
ಈ ಹಿನ್ನೆಲೆಯಲ್ಲಿ ಕೆಳಕಂಡಂತೆ ಚುನಾವಣಾ ವೇಳಾಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ. ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಫೆ. 16ರಂದು ಹೊರಡಿಸುವರು.
ನಾಮಪತ್ರ ಸಲ್ಲಿಸಲು ಫೆ. 23 ಕೊನೆ ದಿನ. 25ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. 27ರಂದು ನಾಮಪತ್ರ ವಾಪಸು ಪಡೆಯಲು ಅಂತಿಮ ದಿನವಾಗಿದೆ. ಮಾ. 7ರಂದು ಚುನಾವಣೆ ನಡೆಯಲಿದೆ.
ಮರು ಮತದಾನ ಅಗತ್ಯವಿದ್ದಲ್ಲಿ ಮಾ. 9ರಂದು ಜರುಗಿಸಲಾಗುವುದು. ಮತಗಳ ಎಣಿಕೆ 11ರಂದು ಆಯಾ ತಾಲೂಕು ಕೇಂದ್ರಗಳಲ್ಲಿ ಜರುಗಲಿದೆ. ಚುನಾವಣೆಯ ಒಟ್ಟಾರೆ ಪ್ರಕ್ರಿಯೆ ಮಾ. 11ರಂದು ಪೂರ್ಣಗೊಳ್ಳುವುದು ಎಂದು ಆಯೋಗ ಪ್ರಕಟಿಸಿದೆ ಎಂದು ಜಿಲ್ಲಾಧಿಕಾರಿ ಎಚ್.ಜಿ. ಶ್ರೀವರ ತಿಳಿಸಿದ್ದಾರೆ.
ನೀತಿ ಸಂಹಿತೆ: ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಫೆ. 15ರ ಬೆಳಗ್ಗೆಯಿಂದ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವ ದಿನದವರೆಗೆ ಅಂದರೆ ಮಾ. 11ರ ವರೆಗೆ ಜಾರಿಯಲ್ಲಿರುತ್ತದೆ.
 ಈ ನೀತಿ ಸಂಹಿತೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಮಾತ್ರ ಅನ್ವಯಿಸುತ್ತದೆ ಎಂದು ಜಿಲ್ಲಾಧಿಕಾರಿ ಎಚ್.ಜಿ.ಶ್ರೀವರ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement