ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಇಂದು ರಕ್ತದಾನ ದಿನಾಚರಣೆ, ಶಿಬಿರ

Mainashree
Updated On : 16 Feb 2013, 10:22 am

ಹಾವೇರಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ವಾರ್ತಾ ಇಲಾಖೆ ಹಾಗೂ ಹಿರೇಕೆರೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಆಶ್ರಯದಲ್ಲಿ ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಮತ್ತು ರಕ್ತದಾನ ಶಿಬಿರ ಫೆ. 16ರಂದು ಬೆಳಗ್ಗೆ 10ಕ್ಕೆ ಹಿರೇಕೆರೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಲಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಎಸ್. ರಾಘವೇಂದ್ರ ಸ್ವಾಮಿ ಉದ್ಘಾಟಿಸುವರು. ಪ್ರಾಚಾರ್ಯ ಎಲ್.ಎಂ. ಪೂಜಾರ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಜಿಲ್ಲಾಧಿಕಾರಿ ಎಚ್.ಜಿ. ಶ್ರೀವರ, ಶಾಸಕ ಬಿ.ಸಿ. ಪಾಟೀಲ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್.ಎನ್. ಮರೆಕ್ಕನವರ, ಜಿಲ್ಲಾ ವಾರ್ತಾಧಿಕಾರಿ ಸಿ.ಪಿ. ಮಾಯಾಚಾರಿ, ಶಿವಾನಂದಪ್ಪ ದೊಡ್ಡಗೌಡರ, ಜಿಲ್ಲಾ ಆರೋಗ್ಯವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಬಿ.ಎಸ್. ಗೌಡರ ಹಾಗೂ  ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಎಸ್. ಪಾಟೀಲ್ ಪಾಲ್ಗೊಳ್ಳುವರು ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಬಸವರಾಜ ಸಜ್ಜನ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement