ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಪುರಸಭೆ ಆಡಳಿತ ಚುಕ್ಕಾಣಿ ಬಿಜೆಪಿಗೆ

Mainashree
Updated On : 18 Feb 2013, 10:24 am

ಬ್ಯಾಡಗಿ: ಪಟ್ಟಣದ ಕನಿಷ್ಠ 16 ವಾರ್ಡ್‌ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಮೂಲಕ ಪುರಸಭೆ ಆಡಳಿತ ಚುಕ್ಕಾಣಿ ಹಿಡಿಯುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಬಿಜೆಪಿ ತಾಲೂಕಾಧ್ಯಕ್ಷ ಅಧ್ಯಕ್ಷ ಚಂದ್ರಣ್ಣ ಮುಚ್ಚಟ್ಟಿ ವಿಶ್ವಾಸ ವ್ಯಕ್ತಪಡಿಸಿದರು.
ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಪಕ್ಷದ ಕಾರ್ಯಾಲಯದಲ್ಲಿ ಕರೆದಿದ್ದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಕಳೆದ 5 ವರ್ಷಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಾಡಿದ ಸಾಧನೆಗಳೇ ಅಭ್ಯರ್ಥಿಗಳ ಗೆಲವಿಗೆ ಸಹಕಾರಿಯಾಗಲಿದೆ. 23 ವಾರ್ಡ್‌ಗಳಲ್ಲೂ ಬಿಜೆಪಿ ಸ್ಪರ್ಧಿಸಲಿದ್ದು, ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯಗೆ ಚಾಲನೆ ನೀಡಲಾಗಿದೆ. ಇನ್ನೆರಡು ದಿನಗಳಲ್ಲಿ ಪಟ್ಟಿಯನ್ನು ಅಂತಿಮಗೊಳಿಸುವುದಾಗಿ ತಿಳಿಸಿದರು.
ಸಾಮಾಜಿಕ ನ್ಯಾಯ: ರೈತ ಮುಖಂಡ ಗಂಗಣ್ಣ ಎಲಿ ಮಾತನಾಡಿ, ಸಾಮಾಜಿಕ ನ್ಯಾಯ ತಳಹದಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು ಎಂದರು.
ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಕಾರ್ಯದರ್ಶಿ ಶಂಕರಗೌಡ ಪಾಟೀಲ ಮಾತನಾಡಿ, ಪ್ರತಿ ವಾರ್ಡ್‌ನಲ್ಲಿ 3ರಿಂದ 4 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದು, ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್‌ಗೆ ಸಲ್ಲಿಸಿ ಬಳಿಕ ಅಂತಿಮಗೊಳಿಸುವುದಾಗಿ ತಿಳಿಸಿದರು. ಸಭೆಯಲ್ಲಿ ಮುಖಂಡರಾದ ಜಯಣ್ಣ ಮಲ್ಲಿಗಾರ, ರಾಮಣ್ಣ ಉಕ್ಕುಂದ, ಸಿ.ಆರ್. ಆಲದಗೇರಿ, ನಾಗಯ್ಯ ಕಲ್ಮಠ, ಪುಂಡಲೀಕಣ್ಣ ಖಟಾವಕರ್, ಸಿ.ಎಸ್. ಶೆಟ್ಟರ್, ಮನೋಹರ ಅರ್ಕಾಚಾರಿ, ಬಸಣ್ಣ ಕುಮ್ಮೂರ, ವಿರೇಂದ್ರ ಶೆಟ್ಟರ, ಶಿವಯೋಗಿ ಅರಳೀಮಟ್ಟಿ, ವಿಷ್ಣುಕಾಂತ್ ಬೆನ್ನೂರ, ಬಸವರಾಜ ಸಂಕಣ್ಣನವರ, ಸಂತೋಷ್ ಮೂಲಿಮನಿ, ಚನ್ನಬಸಪ್ಪ ಮೋಟೆಬೆನ್ನೂರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement