ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ದುಷ್ಕರ್ಮಿಗಳನ್ನು ಬಂಧಿಸಿ

Mainashree
Updated On : 24 Feb 2013, 11:28 am

ಗದಗ: ಹೈದ್ರಾಬಾದ್‌ನಲ್ಲಿ ಈಚೆಗೆ ನಡೆದ ಸರಣಿ ಸ್ಫೋಟ ಪ್ರಕರಣದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ಶ್ರೀರಾಮಸೇನೆಯ ಗದಗ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶ್ರೀರಾಮ ಸೇನೆಯ ಜಿಲ್ಲಾ ಸಂಚಾಲಕ ರಾಜು ಖಾನಪ್ಪನವರ ಮಾತನಾಡಿ, ದೇಶದ ಮುತ್ತಿನ ನಗರಿ ಎಂದೇ ಖ್ಯಾತಿ ಹೊಂದಿರುವ ಹೈದ್ರಾಬಾದ್‌ನಲ್ಲಿ ನಡೆದ ಬಾಂಬ್ ಸ್ಫೋಟ ಘಟನೆಯನ್ನು ಖಂಡಿಸುತ್ತೇವೆ. ದೇಶದ ವಿವಿಧ ಪ್ರದೇಶಗಳಲ್ಲಿ ಕಳೆದ 10 ವರ್ಷಗಳಿಂದ ಬಾಂಬ್ ಸ್ಫೋಟದ ಪ್ರಕರಣಗಳು ನಡೆಯುತ್ತಿವೆ. ಇದು ಅತ್ಯಂತ ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಪಾಕಿಸ್ತಾನದಿಂದ ಪ್ರಚೋದಿತ ಕೆಲ ಮುಸ್ಲಿಂ ಸಂಘಟನೆಗಳು ದೇಶದಲ್ಲಿ ಅಶಾಂತಿ ಸೃಷ್ಟಿಸಿ ಆಂತರಿಕ ಭದ್ರತೆಗೆ ಧಕ್ಕೆ ತರಲು ಯುತ್ನಿಸುತ್ತಿವೆ. ಈ ಸಂಗತಿ ಕೇಂದ್ರದ ಗೃಹ ಸಚಿವರಿಗೆ ತಿಳಿದಿದ್ದರೂ ಸಹ ಕೋಮು ಸೌಹಾರ್ಧತೆಯ ಹೆಸರಿನಲ್ಲಿ ನಿಷ್ಕ್ರಿಯರಾಗಿದ್ದಾರೆ. ಕೆಲ ದಿನಗಳ ಹಿಂದೆ ಮುಸ್ಲಿಂ ಶಾಸಕ ಅಕ್ಬರುದ್ದೀನ ಓವೈಸಿ ಹೈದ್ರಾಬಾದ್‌ನಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಮುಗ್ಧ ಹಿಂದೂಗಳ ನರಮೇಧ ಮಾಡಲು ಕರೆ ನೀಡಿದ್ದರು. ಅವರ ಭಾಷಣದಿಂದ ಪ್ರಚೋದಿತರಾದ ಕೆಲ ದುಷ್ಕರ್ಮಿಗಳು ಹೈದ್ರಾಬಾದ್‌ನಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸಿದ್ದಾರೆ ಎಂದು ಆರೋಪಿಸಿದರು. ಈ ಸಂದರ್ಭದಲ್ಲಿ ಮಹೇಶ ರೋಖಡೆ, ಹುಲಿಗೆಪ್ಪ ವಾಲ್ಮೀಕಿ, ಸದಾನಂದಸಿಂಗ್ ಗುರ್ಲಹೊಸೂರ, ಪ್ರಫುಲ್ ಪುಣೇಕರ, ಸುರೇಶ ಹೆಬಸೂರ, ಪ್ರವೀಣ ನಂದಿಕೋಲಮಠ, ಕೃಷ್ಣ ಕಾಟಗಿ, ಮಂಜು ತುಪ್ಪದ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement