ಆಯುಧಗಳನ್ನು ಠಾಣೆಗೆ ನೀಡಿ
ಹಾವೇರಿ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಿಮಿತ್ತ ಜಿಲ್ಲೆಯಲ್ಲಿ ಲೈಸನ್ಸ್ ಹೊಂದಿರುವವರು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರಗಳನ್ನು ಕಡ್ಡಾಯವಾಗಿ ಡಿಪಾಜಿಟ್ ಮಾಡಬೇಕು. ಆ ಬಗ್ಗೆ ಸ್ವೀಕೃತಿ ಪತ್ರಪಡೆಯಿರಿ. ಆಯುಧಗಳನ್ನು ಜೊತೆಗಿಟ್ಟುಕೊಂಡು ಸಂಚರಿಸುವುದನ್ನು ನಿಷೇಧಿಸಿ ಡಿಸಿ ಎಚ್.ಜಿ. ಶ್ರೀವರ ಆದೇಶಿಸಿದ್ದಾರೆ. ಚುನಾವಣೆ ಪ್ರಕ್ರಿಯೆ ಮುಗಿದು ಫಲಿತಾಂಶ ಹೊರಬಿದ್ದ ವಾರದ ಬಳಿಕ ಸಂಬಂಧಿಸಿದವರಿಗೆ ಆಯುಧಗಳನ್ನು ನೀಡುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ನಿರ್ದೇಶಿಸಿದ್ದಾರೆ. ಈ ಆದೇಶ ಉಲ್ಲಂಘಿಸಿದವರನ್ನು ಶಿಕ್ಷೆಗೆ ಗುರಿಪಡಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ