ಇಂದು ಮಾನವ ಅಭಿವೃದ್ಧಿ ಕಾರ್ಯಾಗಾರ
ರಾಣಿಬೆನ್ನೂರು: ಹಾವೇರಿ ಜಿಲ್ಲೆಯ ಮಾನವ ಅಭಿವೃದ್ಧಿ ವರದಿಯನ್ನು ತಯಾರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈ ಬಗ್ಗೆ ಒಂದು ದಿನದ ಕಾರ್ಯಾಗಾರ ಫೆ. 26ರಂದು ಬೆಳಗ್ಗೆ 11ಕ್ಕೆ ಜಿಪಂ ಸಭಾಂಗಣದಲ್ಲಿ ಜರುಗಲಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಕುಸುಗಲ್ಲ ತಿಳಿಸಿದ್ದಾರೆ. ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಮಟ್ಟದ ಇಲಾಖಾ ಅಧಿಕಾರಿಗಳು, ಕಾಲೇಜುಗಳ ಪ್ರಾಧ್ಯಾಪಕರು, ವಿದ್ಯಾರ್ಥಿಗಳು, ಸರ್ಕಾರೇತರ ಸಂಸ್ಥೆಗಳು, ಮಾಧ್ಯಮ ಪ್ರತಿನಿಧಿಗಳು, ವಿಷಯ ಪರಿಣತರಿಗೆ ಈ ಕಾರ್ಯಾಗಾರ ಏರ್ಪಡಿಸಲಾಗಿದ್ದು, ಇಲ್ಲಿ ಹೊರಹೊಮ್ಮುವ ವಿಷಯಗಳನ್ನು ಜಿಲ್ಲಾ ಮಾನವ ಅಭಿವೃದ್ಧಿ ವರದಿಯಲ್ಲಿ ಸೇರಿಸಲಾಗುವುದೆಂದು ಅವರು ತಿಳಿಸಿದ್ದಾರೆ.