ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಬಿ ಫಾರಂ ನೀಡದೇ ಮೋಸ: ಪಾರ್ವತಿ

Rashmi Kasaragodu
Updated On : 27 Feb 2013, 11:06 am

ಕನ್ನಡಪ್ರಭ ವಾರ್ತೆ, ರಾಣಿಬೆನ್ನೂರು, ಫೆ.26
ನಗರಸಭೆಯ 24ನೇ ವಾರ್ಡಿನಿಂದ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಭರವಸೆ ನೀಡಿ, ನಾಮಪತ್ರ ಸಲ್ಲಿಸುವಂತೆ ತಿಳಿಸಿದ್ದ ಬಿಜೆಪಿ ಮುಖಂಡರು ಕೊನೆ ಗಳಿಗೆಯಲ್ಲಿ ಬಿ ಫಾರಂ ಬೇರೆಯವರಿಗೆ ನೀಡುವ ಮೂಲಕ ಮೋಸವೆಸಗಿದ್ದಾರೆ. ಮುಂಬರುವ ದಿನಗಳಲ್ಲಿ ಅವರಿಗೆ ತಕ್ಕ ಪಾಠಕಲಿಸುವುದಕ್ಕಾಗಿ ತಾವು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವುದಾಗಿ ತಾಲೂಕು ಬಿಜೆಪಿ ಮಹಿಳಾ ಅಧ್ಯಕ್ಷೆ ಪಾರ್ವತಿ ಹೊಸಮನಿ ತಿಳಿಸಿದರು.
ಈ ಕುರಿತಂತೆ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, 20 ವರ್ಷಗಳಿಂದ ಬಿಜೆಪಿ ಕಾರ್ಯಕರ್ತೆಯಾಗಿ ಹಾಗೂ 5 ವರ್ಷಗಳಿಂದ ತಾಲೂಕು ಬಿಜೆಪಿ ಮಹಿಳಾ ಅಧ್ಯಕ್ಷೆಯಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಪಕ್ಷ ಸಂಘಟನೆಗಾಗಿ ಹಗಲಿರುಳೆನ್ನದೆ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿಕೆಟ್ ನೀಡುವ ಭರವಸೆ ನೀಡಿದ್ದ ತಾಲೂಕಾಧ್ಯಕ್ಷ ಡಾ. ಬಸವರಾಜ ಕೆಲಗಾರ, ಜಿಲ್ಲಾಧ್ಯಕ್ಷ ಸೋಮಣ್ಣ ಬೇವಿನಮರದ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಜಂಬಗಿ ನನಗೆ ಮೋಸವೆಸಗಿದರು ಎಂದು ಕಂಬನಿ ಮಿಡಿದರು.
ಈ ಕಾರಣದಿದಂದ ತಾವು 24ನೇ ವಾರ್ಡಿಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು, ಸೋಮವಾರ ಪರಿಶೀಲನೆಯಲ್ಲಿ ಅದು ಸಿಂಧು ಆಗಿದೆ. ಈ ಕುರಿತಂತೆ ಮುಖಂಡರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಪಕ್ಷದ ರಾಜ್ಯ ಹಾಗೂ ರಾಷ್ಟ್ರೀಯ ಮಂಡಳಿಯ ವರಿಷ್ಠರಿಗೆ ದೂರು ಸಲ್ಲಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಹಲವಾರು ಮಹಿಳಾ ನಾಯಕಿಯರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement