ಬ್ಯಾಡಗಿ: ಇಂದು ಶ್ರುತಿ ರೋಡ್ ಶೋ
ಬ್ಯಾಡಗಿ: ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಪಟ್ಟಣಕ್ಕೆ ಖ್ಯಾತ ಚಲನಚಿತ್ರ ನಟಿ ಶ್ರುತಿ ಫೆ. 28ರಂದು ಮಧ್ಯಾಹ್ನ 3 ಗಂಟೆಗೆ ಆಗಮಿಸಲಿದ್ದಾರೆ. ಕೆಜೆಪಿ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಪಟ್ಟಣದಲ್ಲಿ ರೋಡ್ ಶೋ ನಡೆಸಲಿರುವ ಶೃತಿ, ಬಳಿಕ ಬಸ್ ನಿಲ್ದಾಣದ ಬಳಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಾಜಿ ಶಾಸಕ ಸುರೇಶಗೌಡ, ವಿಧಾನ ಪರಿಷತ್ ಸದಸ್ಯ ಶಿವರಾಜ ಸಜ್ಜನ ಪಾಲ್ಗೊಳ್ಳಲಿದ್ದಾರೆ ಎಂದು ಕೆಜೆಪಿ ತಾಲೂಕಾಧ್ಯಕ್ಷ ಮುರಿಗೆಪ್ಪ ಶೆಟ್ಟರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.