ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಕಾವೇರಿ: ರಾಜ್ಯದ ನಿಲುವು ಅಚಲ

Mainashree
Updated On : 22 Jan 2013, 12:54 pm

ಹಾವೇರಿ:  ತಮಿಳುನಾಡಿಗೆ ಕಾವೇರಿ ನೀರು ಬಿಡುವ ಕುರಿತಂತೆ ಈಗಾಗಲೇ ರಾಜ್ಯದ ನಿಲುವನ್ನು ಸುಪ್ರೀಂಕೋರ್ಟ್‌ನಲ್ಲಿ ತಿಳಿಸಲಾಗಿದೆ. ಈ ವಿಷಯದಲ್ಲಿ ಯಾವುದೇ ಗೊಂದಲಗಳಿಲ್ಲ. ನಮ್ಮ ನಿಲುವು ಗಟ್ಟಿಯಾಗಿದೆ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದ್ದಾರೆ. ಇಲ್ಲಿನ ಹುಕ್ಕೇರಿಮಠದಲ್ಲಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮಕ್ಕೂ ಮುನ್ನ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕಾವೇರಿ ನೀರಿನ ಹಂಚಿಕೆ ಕುರಿತಂತೆ ಜಯಲಲಿತಾ ಹೇಳಿಕೆಗೆ ಪ್ರತಿಕ್ರಿಯಿಸಲಾರೆ. ರಾಜ್ಯ ಬರಗಾಲದಿಂದ ತತ್ತರಿಸಿದ್ದು, ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ರಾಜ್ಯದ ನಿಲುವು ಖಚಿತಪಡಿಸಿದ್ದೇವೆ. ಕೋರ್ಟ್ ಆದೇಶದ ಬಳಿಕ ಈ ಕುರಿತಂತೆ ನಿರ್ಧರಿಸಲಾಗುವುದು ಎಂದರು. ತಮ್ಮ ಸಚಿವ ಸಂಪುಟದ ಕೆಲ ಸಚಿವರು ಹಾಗೂ ಶಾಸಕರು ಜ. 23ರಂದು ರಾಜಿನಾಮೆ ಸಲ್ಲಿಸುವ ಕುರಿತಂತೆ ಈಗಾಗಲೇ ಹೇಳಿಕೆ ನೀಡಿದ್ದಾರೆ. ಇದರಿಂದ ಸರ್ಕಾರಕ್ಕೆ ಧಕ್ಕೆ ಆಗುವುದಿಲ್ಲ. ಅವಧಿ ಪೂರ್ಣಗೊಳಿಸಲಿದೆ ಎಂದು  ಜಗದೀಶ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement