ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಸಾರ್ವಜನಿಕರು ರಸ್ತೆ ನಿಯಮ ಪಾಲಿಸಿ

Mainashree
Updated On : 23 Jan 2013, 10:52 am

ಕನ್ನಡಪ್ರಭ ವಾರ್ತೆ, ಹಾವೇರಿ, ಜ.22
ರಸ್ತೆ ನಿಯಮಗಳನ್ನು ಪರಿಪಾಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಪ್ರತಿಯೊಬ್ಬ ನಾಗರಿಕರು ರಸ್ತೆ ನಿಯಮಗಳನ್ನು ತಿಳಿಯಬೇಕೆಂದು ಆಡೂರ ಪೊಲೀಸ್ ಠಾಣೆ ಪಿಎಸ್‌ಐ ಬಸವರಾಜ ಲಮಾಣಿ ಹೇಳಿದರು. ಹಾನಗಲ್ಲ ತಾಲೂಕಿನ ಆಡೂರ ಪೊಲೀಸ್ ಠಾಣೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಇತ್ತೀಚೆಗೆ ಜರುಗಿದ ರಾಷ್ಟ್ರೀಯ ರಸ್ತೆ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವೇಗ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಾಲನೆಯಿಂದ ಇಂದು ಯುವಜನರೇ ಹೆಚ್ಚಾಗಿ ಅಪಘಾಕ್ಕೀಡಾಗುತ್ತಿರುವುದು ದುರ್ದೈವದ ಸಂಗತಿ. ಅತಿಯಾದ ವೇಗ ಹಾಗೂ ಅವಸರದಿಂದ ವಾಹನ ಸವಾರರು ಪ್ರಾಣಕ್ಕೆ ಆಪತ್ತು ತಂದುಕೊಳ್ಳುತಿದ್ದಾರೆ. ಆದ್ದರಿಂದ ಪ್ರತಿಯೊಬ್ಬರೂ ರಸ್ತೆ ನಿಯಮಗಳನ್ನು ತಿಳಿದುಕೊಂಡು, ಪಾಲಿಸಬೇಕೆಂದು ಕರೆ ನೀಡಿದರು.
ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಎಚ್.ಎಸ್. ಶಿವಣ್ಣನವರ ಮಾತನಾಡಿ, ಅಪಘಾತಗಳು ಮದ್ಯಪಾನದ ಅಮಲಿನಲ್ಲಿ ಸಂಭವಿಸುತ್ತಿರುವುದರಿಂದ ಮದ್ಯಪಾನ ಮಾಡಿ ವಾಹನ ಚಲಾಯಿಸಬಾರದು. ಸಂಪೂರ್ಣ ರಸ್ತೆ ಅಪಘಾತಗಳನ್ನು ನಿಲ್ಲಿಸುವ ಅಥವಾ ಅಪಘಾತ ಕಡಿಮೆಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ರಸ್ತೆ ಸಪ್ತಾಹ ಜನಸಾಮಾನ್ಯರಲ್ಲಿ ಅರಿವು ಮೂಡಿಸುವಲ್ಲಿ ಯಶಸ್ವಿಯಾಗಲಿ ಎಂದರು.
ಪ್ರಾಚಾರ್ಯ ಸಿ.ಎಸ್. ಲಂಕೇಶಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಸಂದರ್ಭ ಪೊಲೀಸ್ ಇಲಾಖೆ ಸಿಬ್ಬಂದಿ ಐ.ಡಿ. ಲಂಗೋಟಿ, ಎಂ.ಎನ್. ಗೋಣೇರ, ಎಂ.ಎಂ. ಜಾಧವ, ಎಂ.ಟಿ. ರಾಣಿಬೆನ್ನೂರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೂ ಮುನ್ನ ಆಡೂರು ಗ್ರಾಮದ ಪ್ರಮುಖ ಬೀದಿಗಳಲ್ಲಿ ರಾಷ್ಟ್ರೀಯ ರಸ್ತೆ ಸಪ್ತಾಹ ಕುರಿತು ಜಾಗೃತಿ ಜಾಥಾ ಜರುಗಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement