ರಾಣಿಬೆನ್ನೂರಿನಿಂದಸ್ಪರ್ಧಿಸಲು ಸಿದ್ಧ: ಪೂಜಾರ
ರಾಣಿಬೆನ್ನೂರು: ಪಕ್ಷ ಸಂಘಟನೆಯಲ್ಲಿ ಯುವಕರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿರುವ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿದರೆ, ಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ರಾಣಿಬೆನ್ನೂರು ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧರಿರುವುದಾಗಿ ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಅರುಣಕುಮಾರ ಪೂಜಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 8 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿ ತಾಲೂಕಿನಲ್ಲಿ ಉತ್ತಮ ಸೇವೆ ಸಲ್ಲಿಸಿದ್ದರ ಫಲವಾಗಿ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮಣ್ಣ ಬೇವಿನಮರದ, ಪಕ್ಷದ ಮುಖಂಡರು ವಹಿಸಿದ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಹುದ್ದೆಯಲ್ಲಿ 3 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೇನೆ. ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಉತ್ತಮ ಸೇವೆ ಸಲ್ಲಿಸಿರುವ ತೃಪ್ತಿ ನನಗಿದೆ. ಪಕ್ಷದ ಹೈಕಮಾಂಡ್ ಟಿಕೆಟ್ ನೀಡಿದರೆ ರಾಣಿಬೆನ್ನೂರು ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದವಿರುವುದಾಗಿ ತಿಳಿಸಿದ್ದಾರೆ.